ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
Advertisement
ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ. ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: 2 ಕ್ಷೇತ್ರದಲ್ಲಿ ನಮ್ಮನ್ನು ಗೆಲ್ಲಿಸುವ ಮೂಲಕ ಜನರು ರಾಜ್ಯ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ: ಸಿಎಂ
Advertisement
Advertisement
ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದು ಕಾರ್ಯಕರ್ತರಿಗೆ ಉತ್ಸಾಹ ತುಂಬಿದ್ದಾರೆ. ಇದನ್ನೂ ಓದಿ: ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ