ದಾವಣಗೆರೆ: ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತದೆ. ಬಿಜೆಪಿ ಒಂದು ಕುಟುಂಬ ಇದ್ದಂತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಇದನ್ನೂ ಓದಿ: 2.5 ಲಕ್ಷಕ್ಕೆ ಒಂದು ಕೆಜಿ ಮಾವು – ತೋಟದ ಕಾವಲಿಗೆ 3 ಗಾರ್ಡ್ ನೇಮಕ
ದಾವಣಗೆರೆಯಲ್ಲಿ ತರಳಬಾಳು ಸೇವಾ ಸಮಿತಿ ಹಾಗೂ ಶಿವ ಸೈನ್ಯ ಹಮ್ಮಿಕೊಂಡಿರುವ ಕೊರೊನಾ ಸೋಂಕಿತರಿಗೆ ಉಪಹಾರ ವಿತರಣೆ ಮಾಡುತ್ತಿದ್ದ ಸ್ಥಳಕ್ಕೆ ಆಗಮಿಸಿ ವೀಕ್ಷಣೆ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಒಂದು ಕುಟುಂಬ ಇದ್ದಂತೆ. ಒಂದು ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತದೆ. ಅರುಣ್ ಸಿಂಗ್ ನಮ್ಮ ನಮ್ಮ ಅಭಿಪ್ರಾಯ ಹೇಳುವಂತಹ ಅವಕಾಶ ನೀಡಿದರು,ಇದೊಂದು ವಿಶೇಷ ಪದ್ದತಿ, ಯಾವ ಪಕ್ಷದಲ್ಲಿ ಕೂಡ ಇಲ್ಲ ಎಂದಿದ್ದಾರೆ.
Advertisement
Advertisement
ಸಭೆಯಲ್ಲಿ ಕೇವಲ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚೆ ಮಾತ್ರವಲ್ಲ. ಕೊರೊನಾ ಸಂಕಷ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಆಗಿದೆ. ಮೂರನೇ ಅಲೆ ಬಂದರೆ ಏನು ಮಾಡಬೇಕು ಪಕ್ಷವನ್ನು ಶಕ್ತಿಶಾಲಿಯನ್ನಾಗಿ ಮಾಡಬೇಕು. ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಅರುಣ್ ಸಿಂಗ್ ನಮ್ಮ ನಮ್ಮ ಅಭಿಪ್ರಾಯ ಹೇಳುವಂತಹ ಅವಕಾಶ ನೀಡಿದರು. ರಾಜ್ಯ ಉಸ್ತುವಾರಿಗಳು ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ವಿಚಾರವನ್ನೇ ಚರ್ಚೆ ಮಾಡಿದ್ದಾರೆ ಅಂತ ಅಲ್ಲ. ಗೊಂದಲ ಇರುವ ವ್ಯಕ್ತಿಗಳ ಜೊತೆ ಕೂತು ಚರ್ಚೆ ಮಾಡಿದ್ದಾರೆ. ಅದಕ್ಕಿಂತ ಮುಖ್ಯವಾಗಿ ಕೊರೊನಾ ಸಂದರ್ಭದಲ್ಲಿ ಯಾವ ರೀತಿ ನಿರ್ವಹಣೆ, ನಾಳೆ ಯೋಗ ದಿನಾಚರಣೆ ಬಗ್ಗೆ ಚರ್ಚೆ ಮಾಡಲಾಗಿದೆ. ಈಗ ನಾಯಕತ್ವ ಬದಲಾವಣೆ ಮುಗಿದ ವಿಚಾರ ಕೈ ಬಿಡ್ಬೇಕು ಎಂದು ನೇರವಾಗಿ ಹೇಳಿದ್ದಾರೆ.
Advertisement
Advertisement
ಜಲಸಂಪನ್ಮೂಲ ಇಲಾಖೆ ಟೆಂಡರ್ ಬಗ್ಗೆ ಸಿಎಂ ಹಾಗೂ ಆ ಇಲಾಖೆ ಕಾರ್ಯದರ್ಶಿ ಉತ್ತರ ನೀಡಿದ್ದಾರೆ. ಇದರ ಬಗ್ಗೆ ಚರ್ಚೆಯೇ ಬೇಡ. ಡಿಸೆಂಬರ ತನಕ ತಾಲೂಕು ಹಾಗೂ ಜಿಲ್ಲಾ ಪಂಚಾಯತ ಚುನಾವಣೆ ನಡೆಯಲ್ಲ. ಈಗ ಕೊರೊನಾ ಮೂರನೇ ಅಲೆ ಭೀತಿ ಇದೆ. ಸದ್ಯಕ್ಕೆ ಚುನಾವಣೆ ಬೇಡ ಎಂದು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಟಾಸ್ಕ್ ಪೋರ್ಸ್ ಕಮಿಟಿ ಮಾಡಿ ಉತ್ತಮ ಕೆಲಸವಾಗುತ್ತಿದೆ. ಈ ಕೆಲಸಗಳಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಕೊರೊನಾ ಕಟ್ಟಿಹಾಕಲು ಸಾಧ್ಯವಾಯಿತು. ಲಾಕ್ಡೌನ್ ವಿಸ್ತರಣೆ ಬಗ್ಗೆ ಸೋಮವಾರ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಅಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.