ಬೆಂಗಳೂರು: ಉತ್ತರ ಕರ್ನಾಟಕದ ಶಾಸಕರು ನಮ್ಮ ಮನೆಯಲ್ಲಿ ಊಟ ಮಾಡಿದ್ದರು. ಆದರೆ ಈ ವೇಳೆ ಯಾವುದೇ ಬಂಡಾಯದ ಚರ್ಚೆಯಾಗಿಲ್ಲ, ಅಸಮಾಧಾನ ಇಲ್ಲ ಎಂದು ಶಾಸಕ ಉಮೇಶ್ ಕತ್ತಿ ಸ್ಪಷ್ಟಪಡಿಸಿದರು.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ಉಮೇಶ್ ಕತ್ತಿ, ಕೊರೊನಾದಿಂದ ಬೆಂಗಳೂರಿನಿಂದ ಬಂದಂತಹ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಶಾಸಕರಿಗೆ ತೊಂದರೆಯಾಗಿದೆ. ಏಳು ದಿನಗಳ ಹಿಂದೆ ನಮ್ಮ ಮನೆಯಲ್ಲಿ ಊಟ ಮಾಡಿದ್ವಿ. ಇದೇ ಗುರುವಾರ ಮತ್ತೆ ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ವಿ. ಇದು ಮುಖ್ಯಮಂತ್ರಿ ಅವರ ಗಮನಕ್ಕೂ ಬಂದಿದೆ ಎಂದರು. ಇದನ್ನೂ ಓದಿ: ಬಿಎಸ್ವೈ ಸಿಎಂ ಅಷ್ಟೇ, ಮೋದಿ, ಅಮಿತ್ ಶಾ, ನಡ್ಡಾ ನಮ್ಮ ನಾಯಕರು: ಯತ್ನಾಳ್
Advertisement
Advertisement
ಕಳೆದ ಮೂರು ದಿನಗಳಿಂದ ಮತ್ತೆ ನಾವು ಭೇಟಿ ಆಗಿಲ್ಲ. ಆದರೆ ಊಟ ಮಾಡುವ ಸಂದರ್ಭದಲ್ಲಿ ನಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದೇವೆ. ಈ ವೇಳೆ ಯಾವುದೇ ರಾಜಕೀಯದ ಚರ್ಚೆ ನಡೆದಿಲ್ಲ. ಬಂಡಾಯದ ಚರ್ಚೆಯಾಗಿಲ್ಲ, ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.
Advertisement
ಮೊನ್ನೆ ನನ್ನ ತಮ್ಮನನ್ನು ರಾಜ್ಯಸಭೆಗೆ ಅಭ್ಯರ್ಥಿಯಾಗಿ ಆಯ್ಕೆಗೆ ವಿಚಾರವಾಗಿ ಮುಖ್ಯಮಂತ್ರಿ ಮನೆಗೆ ಹೋಗಿ ಮನವಿ ಮಾಡಿದ್ದೇನೆ. ಲೋಕಸಭೆ ವೇಳೆ ರಾಜ್ಯಸಭೆಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವುದಾಗಿ ಭರವಸೆ ಕೊಟ್ಟಿದ್ದರು. ಅದನ್ನು ಕೇಳಲು ಸಿಎಂ ಮನೆಗೆ ಹೋಗಿದ್ದೆವು. ಯಾವಾಗ ಮಾಡುತ್ತಾರೋ ಮಾಡಲಿ, ಆದರೆ ಶಿಫಾರಸು ಕರ್ನಾಟಕ ರಾಜ್ಯದಿಂದ ಆಗಲಿ ಎಂದು ಹೇಳಿ ಬಂದಿದ್ದೇನೆ ಎಂದು ಉಮೇಶ್ ಕತ್ತಿ ಹೇಳಿದರು.
Advertisement
ಅದೇ ರೀತಿ ರಾಜ್ಯದ ಅಧ್ಯಕ್ಷರನ್ನು ಭೇಟಿಯಾಗಲಿದ್ದೇನೆ. ಈ ನಡುವೆ ಬಂಡಾಯ ಶಾಸಕರ ಭೂಜನ ಕೂಟ ಎಂಬ ಗೊಂದಲ ಸೃಷ್ಟಿಯಾಗಿದೆ. ನಾವು ಜವಾಬ್ದಾರಿ ಶಾಸಕರು, ನಾನು ಒಂಭತ್ತು ಬಾರಿ ಶಾಸಕನಾಗಿದ್ದೇನೆ. ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಹೀಗಾಗಿ ಈ ಕೊರೊನಾ ಸಂದರ್ಭದಲ್ಲಿ ಯಾವುದೇ ಬಂಡಾಯ ಮಾಡಿಲ್ಲ, ಅಸಮಾಧಾನವೂ ಇಲ್ಲ. ಎಲ್ಲಾ ಶಾಸಕರು ಕೂಡಿ ಊಟ ಮಾಡಿದೆವು ವಿನಃ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಕತ್ತಿ ಸ್ಪಷ್ಟನೆ ನೀಡಿದರು.