ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ನಿಯಂತ್ರಿಸಲು ಬಿಬಿಎಂಪಿಯ ಪ್ರಸ್ತಾಪವನ್ನು ಕರ್ನಾಟಕ ಸರ್ಕಾರ ತಿರಸ್ಕರಿಸಿದೆ.
ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
Advertisement
ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ.
— CM of Karnataka (@CMofKarnataka) March 19, 2021
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅನಗತ್ಯ ಆತಂಕ ಹುಟ್ಟಿಸಬೇಡಿ- ಬಿಬಿಎಂಪಿ ಆಯುಕ್ತರಿಗೆ ಸಿಎಂ ತರಾಟೆ
Advertisement
"ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ" : ರಾಜ್ಯದ ಸಮಸ್ತ ನಾಗರಿಕರಲ್ಲಿ ಮುಖ್ಯಮಂತ್ರಿ @BSYBJP ರವರ ಮನವಿ.#KarnatakaFightsCorona pic.twitter.com/LbQBfOAl2u
— CM of Karnataka (@CMofKarnataka) March 19, 2021
Advertisement
ಈ ಟ್ವೀಟ್ಗೂ ಮೊದಲು ಮಾಡಿದ್ದ ಟ್ವೀಟ್ನಲ್ಲಿ, ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದರು.