ಮುಂಬೈ: ಮಹಾರಾಷ್ಟ್ರ ಮಾಜಿ ಸಿಎಂ, ಬಿಹಾರ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ತಮಗೆ ಕೊರೊನಾ ಸೋಂಕು ತಗುಲಿರುವ ಮಾಹಿತಿಯನ್ನ ಫಡ್ನವೀಸ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.
Those who have come in contact with me are advised to get covid19 tests done.
Take care, everyone !
— Devendra Fadnavis (@Dev_Fadnavis) October 24, 2020
Advertisement
ಲಾಕ್ಡೌನ್ ಬಳಿಕ ಪ್ರತಿದಿನ ಕೆಲಸದಲ್ಲಿ ತೊಡಗಿಕೊಂಡಿದ್ದೆ. ಇದೀಗ ದೇವರೇ ವಿಶ್ರಾಂತಿ ತೆಗೆದುಕೊಳ್ಳಲು ರಜೆ ನೀಡಿದ ಹಾಗಿದೆ. ನನ್ನ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆ ಮೇರೆ ಐಸೋಲೇಷನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ದೇವೇಂದ್ರ ಫಡ್ನವೀಸ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
Advertisement
Advertisement
ಎಲ್ಲರೂ ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿ, ಸರ್ಕಾರದ ಕೋವಿಡ್-19 ನಿಯಮಗಳನ್ನ ಪಾಲಿಸಿ ಎಂದು ಫಡ್ನವೀಸ್ ಜನರ ಬಳಿ ಮನವಿ ಮಾಡಿಕೊಂಡಿದ್ದಾರೆ. ಬಿಹಾರದ ಚುನಾವಣಾ ಬಿಜೆಪಿ ಉಸ್ತುವಾರಿಯಾಗಿ ದೇವೇಂದ್ರ ಫಡ್ನವೀಸ್ ಅವರನ್ನ ಪಕ್ಷ ನೇಮಕ ಮಾಡಿತ್ತು. ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಿರಂತರ ಪ್ರಚಾರ ಮತ್ತು ಪಕ್ಷದ ಸಮಾವೇಶಗಳಲ್ಲಿ ಫಡ್ನವೀಸ್ ಭಾಗಿಯಾಗಿದ್ದರು.