ಹಾವೇರಿ: ಊಟ ಕೊಡುವ ನೆಪದಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನನ್ನು ಹಾವೇರಿಯ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Advertisement
ಬಂಧಿತ ಆರೋಪಿಯನ್ನು ಹಾವೇರಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ತಸ್ಲೀಮ್ ಸೆರವಾಡ(23) ಎಂದು ಗುರುತಿಸಲಾಗಿದೆ. ಆರೋಪಿ ಊಟ ಕೊಡುವ ನೆಪದಲ್ಲಿ ಡಿಸೆಂಬರ್ 7ರ ಮಧ್ಯರಾತ್ರಿ ಮುಸುಕು ಹಾಕಿಕೊಂಡು 40 ವರ್ಷದ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ. ಎಪಿಎಂಸಿ ಬಳಿಯ ಉಜ್ಜೀವನ್ ಫೈನಾನ್ಸ್ ಕಟ್ಟಡದಲ್ಲಿ ಘಟನೆ ನಡೆದಿತ್ತು.
Advertisement
Advertisement
ಸಿಸಿಟಿವಿ ದೃಶ್ಯ ಆಧರಿಸಿ ಕಟ್ಟಡದ ಮಾಲೀಕ ನವೀನಕುಮಾರ ತೋಟಣ್ಣನವರ ಪೋಲಿಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು 48 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅಸ್ವಸ್ಥ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಪಿಐ ಮಂಜಣ್ಣ ನೇತೃತ್ವದಲ್ಲಿ ಆರೋಪಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.