ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಎಂಬ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಸೋಂಕಿನ ಯಾವುದೇ ಲಕ್ಷಣ ಇಲ್ಲದಿದ್ದವರಿಗೂ ಕೊರೊನಾ ಪಾಸಿಟಿವ್ ಬರುತ್ತಿದೆ. ಈ ಮಧ್ಯೆ ಕೊಲೆ ಆರೋಪಿಯೊಬ್ಬನಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಪೊಲೀಸರಿಗೆ ಆತಂಕ ಆರಂಭವಾಗಿದೆ.
ಹೌದು. ಹೆಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಬಂಧಿಯಾಗಿದ್ದ ಆರೋಪಿಯ ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ಬಂದಿದೆ. ಈ ವ್ಯಕ್ತಿಗೆ ಆಂಧ್ರ ಟ್ರಾವೆಲ್ ಹಿಸ್ಟರಿ ಇದೆ. ಕೊಲೆ ಆರೋಪಿಗೆ ಕೊರೊನಾ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಕೂಡ ಹೆಮ್ಮಾರಿ ಭೀತಿ ಎದುರಾಗಿದೆ.
Advertisement
Advertisement
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಬೆಂಗಳೂರು ನಗರದಲ್ಲಿ 35 ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇಂದು ಪತ್ತೆಯಾದ 213 ಪ್ರಕರಣಗಳ ಪೈಕಿ 103 ಮಂದಿ ಅಂತರಾಜ್ಯ ಹಾಗೂ 23 ಮಂದಿಗೆ ಅಂತರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.
Advertisement
ಇಂದು 180 ಜನರು ಕೊರೊನಾದಿಂದ ಗುಣಮುಖರಾಗಿ ಕೋವಿಡ್ 19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7213 ಪ್ರಕರಣಗಳಲ್ಲಿ ರಾಜ್ಯದಲ್ಲಿ 2987 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 4135 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೂಡ ಕೊರೊನಾ ತನ್ನ ಮರಣ ಕೇಕೆಯನ್ನು ಮುಂದುವರಿಸಿದ್ದು ಇಬ್ಬರು ಸಾವನ್ನಪ್ಪಿರೋದನ್ನು ಆರೋಗ್ಯ ಇಲಾಖೆ ಖಚಿತಪಡಿಸಿದೆ.
Advertisement
ಕೋವಿಡ್19 ಮಾಹಿತಿ: 15ನೇ ಜೂನ್ 2020
ಒಟ್ಟು ಪ್ರಕರಣಗಳು: 7213
ಮೃತಪಟ್ಟವರು: 88
ಗುಣಮುಖರಾದವರು: 4135
ಹೊಸ ಪ್ರಕರಣಗಳು: 213
ಇತರೆ ಮಾಹಿತಿ: ಜಿಲ್ಲಾವಾರು ಸೋಂಕಿತರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಹೆಚ್ಚಿನ ವಿವರಗಳಿಗಾಗಿ: https://t.co/z9TzXy0Ml9@BSYBJP pic.twitter.com/SxW3Ep1J89
— CM of Karnataka (@CMofKarnataka) June 15, 2020
ರೋಗಿ 7060: ಧಾರವಾಡದ 65 ವರ್ಷದ ವೃದ್ಧ ರೋಗಿ-6222ರ ಜೊತೆ ಸಂಪರ್ಕ ಹೊಂದಿದ್ದರು. ಜೂನ್ 14ರಂದು ದಾಖಲಾಗಿದ್ದ ವೃದ್ಧ ಅಂದೇ ನಿಧನರಾಗಿದ್ದಾರೆ. ರೋಗಿ 7185 ಬೆಂಗಳೂರಿನ 75 ವರ್ಷದ ವೃದ್ಧೆಯಾಗಿದ್ದು, ಜ್ವರದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 13ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 15ರಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.