– 6 ಜಿಲ್ಲೆಯಲ್ಲಿ 200ಕ್ಕಿಂತ ಅಧಿಕ ಜನರಿಗೆ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಕಳೆದ ಏಳು ದಿನಗಳಿಂದ 5 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಬರುತ್ತಿದೆ. ಇಂದು ಕೂಡ ಒಟ್ಟು 5,503 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1.12 ಲಕ್ಷ ಗಡಿ ದಾಟಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಕೋವಿಡ್ ಸೋಂಕಿತರ ಸಂಖ್ಯೆ 1,12,504ಕ್ಕೆ ಏರಿದೆ. ಇಂದು 92 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,147 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
Advertisement
Advertisement
ಇಂದು ರಾಜ್ಯದಲ್ಲಿ 2,397 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,12,504 ಸೋಂಕಿತರ ಪೈಕಿ 67,448 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 42,901 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 639 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಇಂದು 16,995 ರ್ಯಾಪಿಡ್ ಟೆಸ್ಟ್, 15,995 ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು 32,990 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 1,04,603 ಮಂದಿಗೆ ರ್ಯಾಪಿಡ್ ಟೆಸ್ಟ್, 11,71,158 ಮಂದಿಗೆ ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 12,75,761 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 2,270 ಮಂದಿಗೆ ಸೋಂಕು ದೃಢವಾಗಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,091ಕ್ಕೆ ಏರಿಕೆ ಆಗಿದೆ.
ಬಳ್ಳಾರಿಯಲ್ಲಿ 338, ಕಲಬುರಗಿ 168, ಮೈಸೂರು 200, ಉಡುಪಿ 173, ಧಾರವಾಡ 175, ಬೆಳಗಾವಿ 279, ದಕ್ಷಿಣ ಕನ್ನಡ 208, ದಾವಣಗೆರೆ 225 ಮಂದಿಗೆ ಸೋಂಕು ಬಂದಿದೆ. ಒಟ್ಟು 6 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚಿನ ಜನರಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರಿನಲ್ಲಿ 1,118, ಬಳ್ಳಾರಿ 100, ಮೈಸೂರು 134, ದಕ್ಷಿಣ ಕನ್ನಡ 118, ಧಾರವಾಡ 180, ಕಲಬುರಗಿ 119, ಉತ್ತರ ಕನ್ನಡ 106 ಮಂದಿ ಬಿಡುಗಡೆಯಾಗಿದ್ದಾರೆ.