ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾದಿಂದ ಇಬ್ಬರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಅಗ್ರಹಾರ ದಾಸರಹಳ್ಳಿ ಸೋಂಕಿತ ವೃದ್ಧೆ (61) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆನಾರೋಗ್ಯ ಹಿನ್ನೆಲೆಯಲ್ಲಿ ವೃದ್ಧೆಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆ ಸಿಬ್ಬಂದಿ ಕೋವಿಡ್-19 ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರೋದು ಪತ್ತೆಯಾಗಿತ್ತು. ವೃದ್ಧೆಯ ಸಂಪರ್ಕದಲ್ಲಿದ್ದ ನಾಲ್ವರಿಗೆ ಸೋಂಕು ತಗುಲಿದೆ. ಸೋಂಕು ಪತ್ತೆಯಾದ 8 ದಿನಗಳ ಬಳಿಕ ಚಿಕಿತ್ಸ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ.
Advertisement
ಮಹಾಲಕ್ಷ್ಮಿ ಲೇಔಟ್ನ ಮೃತ ವೃದ್ಧ(65)ನ ರಿಪೋರ್ಟ್ ಇಂದು ಬಂದಿದ್ದು, ಸೋಂಕು ತಗುಲಿರೋದು ದೃಢಪಟ್ಟಿದೆ. ವರದಿ ಬರೋ ಮುನ್ನವೇ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿರೋದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಅಂತ್ಯ ಸಂಸ್ಕಾರದಲ್ಲಿ ಯಾರು ಭಾಗವಹಿಸಿದ್ರೂ ಎಂಬ ಮಾಹಿತಿಯನ್ನು ಆರೋಗ್ಯಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ.
Advertisement