ಶಿವಮೊಗ್ಗ: ಬೆಂಗಳೂರಿನಲ್ಲಿ ಗಲಭೆ ಮಾಡಿದವರನ್ನು ಗಡಿಪಾರು ಮಾಡಿ ಎಂದು ಬಜರಂಗದಳ ಮತ್ತು ವಿಎಚ್ಪಿ ಸಂಘಟನೆ ಪ್ರತಿಭಟನೆ ಮಾಡಿ ಒತ್ತಾಯಿಸಿವೆ.
ಬೆಂಗಳೂರಿನ ಡಿ.ಜೆ. ಹಳ್ಳಿ ಹಾಗೂ ಕೆ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ನಡೆಸಿ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಗೆ ಕಾರಣರಾಗಿರುವ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಇಂದು ವಿಎಚ್ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Advertisement
Advertisement
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ದಾಳಿ ನಡೆಸಿದ ಗೂಂಡಾಗಳನ್ನು ಗಡಿಪಾರು ಮಾಡಬೇಕು ಹಾಗೂ ಆಸ್ತಿಪಾಸ್ತಿ ಹಾನಿ ಮಾಡಿರುವ ಗೂಂಡಾಗಳಿಂದ ನಷ್ಟ ವಸೂಲಿ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳಿಗೆ ಪಾಕಿಸ್ತಾನದ ಐಎಸ್ಐ ನಂಟು ಇದೆ. ಈಗಾಗಿ ಇವೆರಡು ಸಂಘಟನೆಯನ್ನು ಸರ್ಕಾರ ಶೀಘ್ರ ನಿಷೇಧಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ವಿಎಚ್ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದರು.