-ಆಂಬುಲೆನ್ಸ್ನಲ್ಲೇ ಪ್ರಾಣ ಬಿಟ್ಟ ಮಹಿಳೆ
ಬೆಂಗಳೂರು: ಆಸ್ಪತ್ರೆಯಲ್ಲಿ ಬೆಡ್ ಸಿಗದೆ 6 ದಿನದ ಬಾಣಂತಿ ಕೊರೊನಾಗೆ ಬಲಿಯಾಗಿರುವ ಅಮಾನವೀಯ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ರಾಜಾಜಿನಗರ ಖಾಸಗಿ ಆಸ್ಪತ್ರೆಯಲ್ಲಿ 6 ದಿನಗಳ ಹಿಂದೆ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದರು. ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದರು. ಆದರೆ ಮನೆಗೆ ತೆರಳಿದ ಸಂದರ್ಭದಲ್ಲಿ ಮಹಿಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಬಾಣಂತಿಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಅವರಿಗೆ ಆ್ಯಂಟಿಜೆನ್ ಟೆಸ್ಟ್ ಮಾಡಿದ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
Advertisement
Advertisement
ಕೊರೊನಾ ಸೋಂಕು ದೃಢವಾಗುತ್ತಿದಂತೆ ಮಹಿಳೆಯನ್ನು ಖಾಸಗಿ ಆಸ್ಪತ್ರೆಯಿಂದ ಕರೆದುಕೊಂಡು ಚಿಕಿತ್ಸೆ ಪಡೆಯಲು ಆಂಬುಲೆನ್ಸ್ ನಲ್ಲಿ ತೆರಳಿದ್ದರು. ನಿನ್ನೆ ಸಂಜೆ 4 ಗಂಟೆಯಿಂದ ಬಾಣಂತಿಯನ್ನು ಕರೆದುಕೊಂಡು ವಿವಿಧ ಆಸ್ಪತ್ರೆಗೆ ಭೇಟಿ ನೀಡಿದರೂ ಚಿಕಿತ್ಸೆ ನೀಡಲು ನಿರಾಕರಿಸಲಾಗಿತ್ತು. ಬಹುತೇಕ ಆಸ್ಪತ್ರೆಗಳು ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ ಎಂದು ತಿಳಿಸಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದರು.
Advertisement
Advertisement
ಮಹಿಳೆಯ ಕುಟುಂಬಸ್ಥರು ತಮಗೆ ತಿಳಿದಿದ್ದ ವ್ಯಕ್ತಿಯೊಬ್ಬರಿಂದ ಶಿಫಾರಸು ಪಡೆದು ಕೊನೆಗೆ ಮುಂಜಾನೆ 4 ಗಂಟೆ ವೇಳೆಗೆ ಬೊಮ್ಮಸಂದ್ರದ ನಾರಾಯಣ ನೇತ್ರಾಲಯ ಆಸ್ಪತ್ರೆಗೆ ದಾಖಲು ಆಗಮಿಸಿದ್ದರು. ಆದರೆ ಆ ವೇಳೆಗೆ ಬಾಣಂತಿ ಆಂಬುಲೆನ್ಸ್ ನಲ್ಲೇ ಸಾವನ್ನಪ್ಪಿದ್ದರು. ಸರಿ ಸುಮಾರು 12 ಗಂಟೆಗಳ ಕಾಲ ನಗರದ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದರು ಮಹಿಳೆಗೆ ಚಿಕಿತ್ಸೆ ಲಭಿಸಿರಲಿಲ್ಲ.