ಬೆಂಗಳೂರು: ಇಂದು ಬೆಳಗ್ಗೆಯಿಂದ ಸಿಲಿಕಾನ್ ಸಿಟಿಯ ಹಲವೆಡೆ ಮೋಸ ಮುಸುಕಿದ ವಾತಾವರಣ ಕಂಡು ಬಂದಿತ್ತು. ಸಂಜೆ 4 ಗಂಟೆ ಬಳಿಕ ಮಳೆರಾಯ ಸುರಿಯಲಾರಂಭಿಸಿದ್ದಾನೆ.
ರಾತ್ರಿ 8 ಗಂಟೆಯೊಳಗೆ ಮನೆ ಸೇರಿಕೊಳ್ಳಬೇಕೆಂದು ಹೋಗುತ್ತಿದ್ದ ಸವಾರರಿಗೆ ಮಳೆ ಅಡ್ಡಿಯನ್ನುಂಟು ಮಾಡಿದೆ. ಸಂಜೆ ಮಳೆಗೆ ಬೆಂಗಳೂರಿನ ಕೆಲ ಭಾಗಗಳಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿದ್ದು, ದ್ವಿಚಕ್ರ ಸವಾರರು ಮಳೆಯಲ್ಲಿ ಸಿಲುಕುವಂತಾಯ್ತು. ಬಿಟ್ಟು ಬಿಟ್ಟು ಮಳೆ ಬರುತ್ತಿದ್ದು, ಬೆಂಗಳೂರು ಸಿಟಿ ಕೂಲ್ ಆಗಿದೆ.
Advertisement
ಇತ್ತ ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ ಕೊಡಗು, ಚಿಕ್ಕಮಗಳೂರು, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆದುಕೊಳ್ಳುತ್ತಿದೆ.
Advertisement