ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವರುಣ ತಂಪೆರೆದೆದಿದ್ದು, ಕೇವಲ ಅರ್ಧ ಗಂಟೆ ಸುರಿದ ಮಳೆಗೆ ಬೆಂಗಳೂರು ತತ್ತರಗೊಂಡಿದೆ.
ಒಂದೆಡೆ ಟ್ರಾಫಿಕ್ ಸಮಸ್ಯೆಯಾದರೆ, ಇನ್ನೊಂದೆಡೆ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಲಗ್ಗೆರೆ, ರಾಜಾಜಿನಗರ, ನಂದಿನಿ ಲೇಔಟ್, ಯಶವಂತಪುರ, ಹೆಬ್ಬಾಳ, ಮಲ್ಲೇಶ್ವರ, ಮೆಜೆಸ್ಟಿಕ್, ಕಾರ್ಪೊರೇಷನ್ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದ್ದು, ಉದ್ಯಾನ ನಗರಿ ಫುಲ್ ಕೂಲ್ ಆಗಿದೆ. ಆದರೆ ರಸ್ತೆ ಹಾಗೂ ಅಂಡರ್ ಪಾಸ್ಗಳಲ್ಲಿ ನೀರು ತುಂಬಿದ್ದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.
Advertisement
Advertisement
ಅರ್ಧಗಂಟೆ ಸುರಿದ ಮಳೆಗೆ ಬೆಂಗಳೂರು ತತ್ತರಿಸಿದ್ದು, ಲಗ್ಗೆರೆ ಬ್ರಿಡ್ಜ್ ತುಂಬಾ ನೀರು ನಿಂತಿದೆ. ಲಗ್ಗೆರೆ ಬ್ರಿಡ್ಜ್ ಬಳಿ ವಾಹನ ಸವಾರರ ಪರದಾಡುವಂತಾಗಿದ್ದು, ಫುಲ್ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಇದೇ ಟ್ರಾಫಿಕ್ ಜಾಮ್ನಲ್ಲಿ ಅಂಬುಲೆನ್ಸ್ ಸಿಲುಕಿದ ಚಿತ್ರಣ ಸಹ ಕಂಡು ಬಂತು. ಒಟ್ಟಿನಲ್ಲಿ ಕೇವಲ ಅರ್ಧ ಗಂಟೆ ಸುರಿದ ಮಳೆಗೆ ಬೆಂಗಳೂರಿಗರು ಕಂಗಾಲಾಗಿದ್ದಾರೆ.