– 6,583 ಜನ ಗುಣಮುಖ
– ಮೈಸೂರಿನಲ್ಲಿ 748 ಮಂದಿಗೆ ಕೋವಿಡ್
ಬೆಂಗಳೂರು: ರಾಜ್ಯದಲ್ಲಿ ಇಂದು 9,725 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 4,84,990ಕ್ಕೆ ಏರಿಕೆಯಾಗಿದೆ.
Advertisement
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 70 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 7,536 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
Advertisement
Advertisement
ಇಂದು ರಾಜ್ಯದಲ್ಲಿ 6,583 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 4,84,990 ಸೋಂಕಿತರ ಪೈಕಿ 1,01,626 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 3,75,809 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 818 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಇಂದು 34,336 ಮಂದಿಯ ರ್ಯಾಪಿಡ್ ಟೆಸ್ಟ್ ನಲ್ಲಿ 36,645 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 70,981 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 13,71,851 ಮಂದಿಗೆ ರ್ಯಾಪಿಡ್ ಟೆಸ್ಟ್, 26,14,432 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 39,86,283 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 3,571 ಮಂದಿಗೆ ಸೋಂಕು ದೃಢವಾಗಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,80,283ಕ್ಕೆ ಏರಿಕೆ ಆಗಿದೆ. ಬಳ್ಳಾರಿ 381, ಬೆಳಗಾವಿ 258, ಚಿತ್ರದುರ್ಗ 227, ದಕ್ಷಿಣ ಕನ್ನಡ 466, ದಾವಣಗೆರೆ 313, ಧಾರವಾಡ 246, ಹಾಸನ 308, ಕಲಬುರಗಿ 221, ಮೈಸೂರು 748, ಶಿವಮೊಗ್ಗ 293, ತುಮಕೂರು 401 ಹಾಗೂ ಉತ್ತರ ಕನ್ನಡ 294 ಮಂದಿಯಲ್ಲಿ ಇಂದು ಸೋಂಕು ಪತ್ತೆಯಾಗಿದೆ.
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 177, ಬೆಂಗಳೂರು ನಗರ 3,773, ಬೀದರ್ 67, ಚಾಮರಾಜನಗರ 0, ಚಿಕ್ಕಬಳ್ಳಾಪುರ 158, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 0, ದಾವಣಗೆರೆ 85, ಧಾರವಾಡ 0, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 0, ಕೊಡಗು 0, ಕೋಲಾರ 54, ಕೊಪ್ಪಳ 0, ಮಂಡ್ಯ 0, ಮೈಸೂರು 1,285, ರಾಯಚೂರು 171, ರಾಮನಗರ 44, ಶಿವಮೊಗ್ಗ 0, ತುಮಕೂರು 380, ಉಡುಪಿ 0, ಉತ್ತರ ಕನ್ನಡ 136, ವಿಜಯಪುರ 65, ಯಾದಗಿರಿ 188 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದಿನ 16/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/0Xb7eJ4lf9 pic.twitter.com/hrMdu6TIBc
— K'taka Health Dept (@DHFWKA) September 16, 2020