ಬೆಂಗಳೂರು: ಕೊರೊನಾ ಮಹಾಮಾರಿ ಜಂಜಾಟದ ನಡುವೆ ಸಿಲಿಕಾನ್ ಸಿಟಿಯಲ್ಲಿ ಭಗ್ನಪ್ರೇಮಿಯೊಬ್ಬ ತನ್ನ ಪ್ರೇಯಸಿಯ ಕೊಲೆಗೆ ಯತ್ನಿಸಿದ್ದಾನೆ.
ನಿತ್ಯಸ್ವಿ ಮಾರಣಾಂತಿಕ ಹಲ್ಲೆಗೆ ಒಳಗಾದ ಯುವತಿ. ಪ್ರಿಯತಮನ ಮಚ್ಚಿನೇಟಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈಕೆಯ ಸ್ಥಿತಿ ಚಿಂತಾಜನಕವಾಗಿದೆ.
Advertisement
Advertisement
ಕೊಲೆಯತ್ನ ಯಾಕೆ?:
ಹಲ್ಲೆಗೊಳಗಾದ ಯುವತಿಗೆ ಬೇರೊಬ್ಬನ ಜೊತೆ ಮದುವೆ ಫಿಕ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ತನ್ನೊಂದಿಗೆ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದರಿಂದ ಕೋಪೋದ್ರಿಕ್ತನಾದ ಯುವಕ ಕೊಲೆ ಯತ್ನ ಮಾಡಿದ್ದಾನೆ.
Advertisement
ಜೂನ್ ತಿಂಗಳಲ್ಲಿ ಯುವತಿ ಮದುವೆ ನಡೆಯುವುದಿತ್ತು. ಹೀಗಾಗಿ ಯುವಕ ಇಂದು ಅನ್ನಪೂರ್ಣೇಶ್ವರಿ ನಗರದ ವಿಶಾಲ್ ಮಾರ್ಟ್ ಬಳಿ ಆಕೆಯ ಮೇಲೆ ಮಚ್ಚು ಬೀಸಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ಯುವತಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.