ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ದುರ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ನಿವಾಸಿ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ ಅಬ್ದುರ್ ರೆಹಮಾನ್ ಬಂಧನದ ನಂತರ ಕರ್ನಾಟಕದ ಮೂರು ಕಡೆ ಎನ್ಐಎ ದಾಳಿ ಮಾಡಿದೆ.
Advertisement
Advertisement
ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್ಐಎ ವಶಪಡಿಸಿಕೊಂಡಿದೆ. ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದಾನೆ. ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.
Advertisement
2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.