ಬೆಂಗಳೂರು: ಬಿಜೆಪಿಯ ಭಿನ್ನಮತೀಯ ಶಾಸಕನ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಂದ ಆಗ್ರಹಿಸಿದ್ದಾರೆ.
ಬಿಜೆಪಿಯ ಭಿನ್ನಮತೀಯ ಶಾಸಕ ಅರವಿಂದ್ ಬೆಲ್ಲದ ಅವರು ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು. ಈ ಆರೋಪವನ್ನು ತಿಪ್ಪೆ ಸಾರಿಸುವ ಸ್ಪಷ್ಟೀಕರಣದ ಮೂಲಕ ಮುಚ್ಚಿಹಾಕುವ ಪ್ರಯತ್ನ ಮಾಡದೆ ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
Advertisement
Advertisement
ಫೋನ್ ಟ್ಯಾಪಿಂಗ್ ಆಗುತ್ತಿರುವುದನ್ನು ಬಹಿರಂಗಪಡಿಸುವ ಧೈರ್ಯ ತೋರಿದ ಶಾಸಕ ಅರವಿಂದ್ ಬೆಲ್ಲದ್ ಅವರನ್ನು ಅಭಿನಂದಿಸುತ್ತೇನೆ. ಇದು ಕೇವಲ ಬೆಲ್ಲದರೊಬ್ಬರ ಫೋನ್ ಗೆ ಸಂಬಂಧಿಸಿದ್ದಾಗಿರಲಿಕ್ಕಿಲ್ಲ, ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರೆಂದು ಗುರುತಿಸಿಕೊಂಡಿರುವ ಇತರ ಶಾಸಕರು ಮಾತ್ರವಲ್ಲ ವಿರೋಧಪಕ್ಷದ ನಾಯಕರ ಫೋನ್ ಗಳ ಕದ್ದಾಲಿಕೆಯೂ ನಡೆದಿರುವ ಎಲ್ಲ ಸಾಧ್ಯತೆಗಳೂ ಇವೆ.
Advertisement
Advertisement
ರಾಜ್ಯ ಬಿಜೆಪಿಯ ಭಿನ್ನಮತೀಯ ನಾಯಕರಿಂದ ಮುಖ್ಯಮಂತ್ರಿಗಳನ್ನು ಪದಚ್ಯುತಿಗೊಳಿಸುವ ಪ್ರಯತ್ನ ನಡೆಯುತ್ತಿರುವ ಸಂದರ್ಭದಲ್ಲಿಯೇ ಇಂತಹದ್ದೊಂದು ಆರೋಪ ವ್ಯಕ್ತವಾಗಿದೆ. ಅರವಿಂದ್ ಬೆಲ್ಲದ್ ಅವರು ಭಿನ್ನಮತೀಯರ ಜೊತೆ ಗುರುತಿಸಿಕೊಂಡಿರುವ ಪ್ರಮುಖ ಶಾಸಕರೂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಪದ ಗುರಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಗಿರುತ್ತಾರೆ. ಬೆಲ್ಲದ್ ಅವರ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆ ನಡೆಸಿದರೂ ಅದರಿಂದ ಸತ್ಯ ಸಂಗತಿ ಖಂಡಿತ ಹೊರಬರಲಾರದು. ಆದ್ದರಿಂದ ಈ ತನಿಖೆಯನ್ನು ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದಲೇ ನಡೆಸುವುದು ಸೂಕ್ತವಾಗಿದೆ. ಬೆಲ್ಲದ ಅವರು ತನ್ನ ಆರೋಪದಲ್ಲಿ ಈಗಾಗಲೇ ಜೈಲಲ್ಲಿರುವ ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರ ಒಡನಾಡಿಯಾಗಿದ್ದ ಯುವರಾಜ ಸ್ವಾಮಿ ಎಂಬ ವ್ಯಕ್ತಿಯ ಹೆಸರೂ ಪ್ರಸ್ತಾಪವಾಗಿದೆ. ಈ ಬಗ್ಗೆಯೂ ತನಿಖೆಯಾಗಬೇಕಾಗಿದೆ.
ಫೋನ್ ಗಳನ್ನು ಕದ್ದಾಲಿಸುವ ಹತಾಶ ಸ್ಥಿತಿಗೆ ಮುಖ್ಯಮಂತ್ರಿಗಳು ಇಳಿದಿರುವುದು ಪಕ್ಷದ ಶಾಸಕರ ವಿಶ್ವಾಸವನ್ನು ಅವರು ಕಳೆದುಕೊಂಡಿರುವುದಕ್ಕೆ ಸಾಕ್ಷಿಯಾಗಿದೆ. ಹಣದ ಆಮಿಷವೊಡ್ಡಿ ಅಡ್ಡಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ತನ್ನ ಆಸೆ ತೀರಿಸಿಕೊಂಡ ಬಿ.ಎಸ್.ಯಡಿಯೂರಪ್ಪನವರಿಗೆ ಮುಖ್ಯಮಂತ್ರಿಯಾದಾಗಲೂ ಶಾಸಕರ ಬೆಂಬಲ ಇರಲಿಲ್ಲ, ಈಗಲೂ ಇಲ್ಲ. ಇದನ್ನೂ ಓದಿ: ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?
ಇಡೀ ರಾಜ್ಯ ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವಾಗಲೇ ಆಡಳಿತಾರೂಢ ಬಿಜೆಪಿಯ ನಾಯಕರು ಬೀದಿಬೀದಿಗಳಲ್ಲಿ ಕಚ್ಚಾಟಕ್ಕೆ ಇಳಿದಿರುವುದು ನೋಡಿದರೆ ಇವರಿಗೆ ಅಧಿಕಾರದ ಲಾಲಸೆ ಮಾತ್ರ ಇದೆ ಹೊರತು ರಾಜ್ಯದ ಜನರ ಹಿತರಕ್ಷಣೆಯ ಕಾಳಜಿ ಕಿಂಚಿತ್ತೂ ಇಲ್ಲ ಎನ್ನುವುದು ಸಾಬೀತಾಗಿದೆ. ಭಿನ್ನಮತೀಯ ಚಟುವಟಿಕೆಗಳಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಬ್ಧವಾಗಿದೆ.ಈ ಪರಿಸ್ಥಿವತಿಯನ್ನು ಘನತೆವೆತ್ತ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಈ ಜನದ್ರೋಹಿ ಸರ್ಕಾರವನ್ನು ವಜಾಮಾಡಬೇಕು ಎಂದು ಆಗ್ರಹಪಡಿಸುತ್ತೇನೆ.
ಪೋನ್ ಕದ್ದಾಲಿಕೆಯ ಆರೋಪದ ಗುರಿ @CMofKarnataka ಅವರೇ ಆಗಿರುವುದರಿಂದ ರಾಜ್ಯಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆಯಿಂದ ತನಿಖೆ ನಡೆಸಿದರೂ ಸತ್ಯ ಸಂಗತಿ ಹೊರಬರಲಾರದು. ಹೈಕೋರ್ಟ್ ಹಾಲಿ ನ್ಯಾಯಾಧೀಶರ ತನಿಖೆಯೇ ಸೂಕ್ತ.#NoTrustWithinBJP
2/7 pic.twitter.com/uf0cEV7DqN
— Siddaramaiah (@siddaramaiah) June 17, 2021
ಬೆಲ್ಲದ್ ಆರೋಪವೇನು?: ಯುವರಾಜ ಸ್ವಾಮಿ ಕಾಲ್ ಹಿಂದೆ ಷಡ್ಯಂತ್ರ ಇದೆ. ನಮ್ಮ ತಂದೆ ಚಂದ್ರಕಾಂತ್ ಬೆಲ್ಲದ್ 5 ಬಾರಿ ಶಾಸಕರಾಗಿದ್ದರು. ಕಪ್ಪು ಚುಕ್ಕಿ ಇಲ್ಲದೆ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ನಾನು ಅದೇ ಮಾರ್ಗದಲ್ಲಿ ಹೋಗುತ್ತಿದ್ದೇನೆ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತೆ. ನನ್ನ ಫೋನ್ ಕೂಡ ಟ್ಯಾಪ್ ಆಗಿದೆ. ಈ ಸಂಬಂಧ ಸ್ಪೀಕರ್ ಹಾಗೂ ಗೃಹ ಸಚಿವರಿಗೆ ಡಿಜಿಗೆ ಪತ್ರ ಕೊಟ್ಟಿದ್ದೇನೆ ಎಂದು ಹೇಳುತ್ತಾ ಬೆಲ್ಲದ್ ಅವರು ಪತ್ರವನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್-ಸ್ಪೀಕರ್, ಗೃಹ ಸಚಿವರಿಗೆ ದೂರು