– ಆಹಾರ ಪ್ಯಾಕೆಟ್ ಸಾಗಿಸ್ತಿದ್ದ ಟ್ರಕ್ನಲ್ಲಿ ಪ್ರಯಾಣ
ಲಕ್ನೋ: ಎರಡು ಟ್ರಕ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 23 ಮಂದಿ ಪ್ರವಾಸಿ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದ ಟ್ರಕ್ಗೆ ಮತ್ತೊಂದು ಟ್ರಕ್ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 23 ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಈ ಅಪಘಾತದಲ್ಲಿ 15 ರಿಂದ 20 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
The incident took place at around 3:30 am. 23 people have died and around 15-20 have suffered injuries. Most of them are Bihar, Jharkhand and West Bengal: Abhishek Singh, DM Auraiya pic.twitter.com/fLpnPTAYmD
— ANI UP/Uttarakhand (@ANINewsUP) May 16, 2020
Advertisement
Advertisement
ಕೊರೊನಾ ಲಾಕ್ಡೌನ್ನಿಂದಾಗಿ ಪ್ರವಾಸಿ ಕಾರ್ಮಿಕರು ಉದ್ಯೋಗವಿಲ್ಲದೆ ಪರದಾಡುತ್ತಿದ್ದರು. ಹೀಗಾಗಿ ಕಾರ್ಮಿಕರು ರಾಜಸ್ಥಾನದಿಂದ ಟ್ರಕ್ ಮೂಲಕ ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ತಮ್ಮ ಗ್ರಾಮಗಳಿಗೆ ಹೋಗುತ್ತಿದ್ದರು. ಲಾಕ್ಡೌನ್ನಿಂದಾಗಿ ತಮ್ಮ ಮನೆಗೆ ಹೋಗಲು ಯಾವುದೇ ಬಸ್ ವ್ಯವಸ್ಥೆಗಳಿರಲಿಲ್ಲ. ಹೀಗಾಗಿ ಕಾರ್ಮಿಕರು ಆಹಾರ ಪ್ಯಾಕೆಟ್ಗಳನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಪ್ರಯಾಣ ಮಾಡುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement
ಈ ಅಪಘಾತ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತವಾದ ತಕ್ಷಣ ಕಾರ್ಮಿಕರಿಗೆ ಸ್ಥಳೀಯರು ಸಹಾಯ ಮಾಡಿದ್ದು, ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಔರೈಯಾದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.