ಕಲಬುರಗಿ: ನಗರದಲ್ಲಿ ಬೈಕ್ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಬೇಟೆಗಿಳಿದಿರುವ ಕಲಬುರಗಿ ಖಾಕಿ ಪಡೆ ಇಂದು ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿ, 16 ಬೈಕ್ ವಶಪಡಿಸಿಕೊಂಡಿದ್ದಾರೆ.
ಮಲ್ಲಿಕಾರ್ಜುನ ಕೋರಿ(21), ಪ್ರಸಾದ್ ಬಿದನೂರ್( 22) ಎಂಬ ಕುಖ್ಯಾತ ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಇವರು ನಗರದ ವಿವಿಧ ಕಡೆಗಳಲ್ಲಿ ಬೈಕ್ ಕಳ್ಳತನ ಮಾಡಿ, ಹಳ್ಳಿಗಳಲ್ಲಿ ಹೋಗಿ ಮಾರಾಟ ಮಾಡುತ್ತಿದ್ದರು.
Advertisement
Advertisement
ಈ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಕಲಬುರಗಿಯ ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಸಿದ್ದರಾಮ್ ಗಡೆದ ಹಾಗೂ ಅವರ ಸಿಬ್ಬಂದಿ ತನಿಖೆ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಿದ್ದ 16 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.