ಮಡಿಕೇರಿ: ಸತತ 10 ದಿನಗಳ ನಂತರ ಪತ್ತೆ ಹಚ್ವಲು ಸಾಧ್ಯವಾಗದಂತಹ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ನಾಗತೀರ್ಥ ಸಮೀಪ ಪತ್ತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಬ್ರಹ್ಮಗಿರಿ ಬೆಟ್ಟದಲ್ಲಿ ಇಂದು ಮತ್ತೊಂದು ಶವ ಪತ್ತೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅರ್ಚಕ ನಾರಾಯಣಾಚಾರ್ ಪತ್ತೆಯಾದ ಸ್ಥಳದಿಂದ ಬಹುದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಆದರೆ ಮೃತದೇಹ ಹೆಣ್ಣು ಅಥವಾ ಗಂಡು ಎಂದು ಗುರುತಿಸಲಾಗದಷ್ಟು ಕೊಳೆತಿದೆ. ಮಾಹಿತಿ ತಿಳಿದ ಸಚಿವ ಸೋಮಣ್ಣ ಮತ್ತು ಸಂಸದ ಪ್ರತಾಪ ಸಿಂಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
ಕೊಡಗಿನ ತಲಕಾವೇರಿಯಲ್ಲಿ ಭೂಕುಸಿತ ಸಂಭವಿಸಿ ಕಣ್ಮರೆಯಾಗಿದ್ದ ಐವರ ಪೈಕಿ ಪ್ರಸ್ತುತ ಮೂವರ ಮೃತದೇಹಗಳು ಸಿಕ್ಕಿದೆ. ಹತ್ತು ದಿನಗಳ ಬಳಿಕ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ. ನಾರಾಯಣ ಆಚಾರ್ ಮೃತದೇಹ ಪತ್ತೆಯಾದ ಜಾಗದ ಅನತಿ ದೂರದಲ್ಲಿ ಪತ್ತೆಯಾಗಿದೆ. ಆದರೆ ಅದು ಮಹಿಳೆ ಅಥವಾ ಪುರುಷನದೋ ಎಂದು ತಿಳಿಯುತ್ತಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಯಾರದ್ದೆಂದು ತಿಳಿಯಲಿದೆ. ಸಂಜೆ ಶವ ಸಂಸ್ಕಾರ ನಡೆಯಲಿದೆ. ಯಾವುದೇ ಕಾರಣಕ್ಕೂ ಕಾರ್ಯಾಚರಣೆಯನ್ನು ಕೈ ಬಿಡುವುದಿಲ್ಲ ಎಂದು ಸಚಿವ ಸೋಮಣ್ಣ ತಿಳಿಸಿದರು.
Advertisement
Advertisement
ಈ ಹಿಂದೆ ಬೆಟ್ಟ ಕುಸಿದ ಆರು ದಿನಗಳ ನಂತರ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಕಾರ್ಯಾಚರಣೆಯಲ್ಲಿ ಪ್ರಪಾತದಲ್ಲಿ ನಾರಾಯಣಾಚಾರ್ ಆಚಾರ್ಯ ಮೃತದೇಹ ಪತ್ತೆಯಾಗಿತ್ತು. ನಾರಾಯಣಾಚಾರ್ ಆಚಾರ್ಯ ಮೃತದೇಹ ಮನೆಯಿಂದ ಅರ್ಧ ಕಿ.ಮೀ ದೂರಕ್ಕೆ ಕೊಚ್ಚಿಕೊಂಡು ಹೋಗಿತ್ತು. ಹೀಗಾಗಿ ಪ್ರಪಾತದಲ್ಲಿ ಶವ ಪತ್ತೆಯಾಗಿತ್ತು.