ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ಆಟಗಾರ ಕುಮಾರ್ ಸಂಗಕ್ಕಾರ ಅವರು ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರನ್ನು ಹಾಡಿ ಹೊಗಳಿದ್ದಾರೆ.
ಸಂಗಕ್ಕಾರ ‘ಆರ್ಕೆ ಶೋ’ನಲ್ಲಿ ಮಾತನಾಡುತ್ತಾ, “ಕ್ರಿಕೆಟ್ ದಂತಕಥೆ, ಆಸ್ಟ್ರೇಲಿಯಾದ ಸರ್ ಡಾನ್ ಬ್ರಾಡ್ಮನ್ ಬಿಟ್ಟರೆ ವಿರಾಟ್ ಕೊಹ್ಲಿ ಎರಡನೇ ಶ್ರೇಷ್ಠ ಕ್ರಿಕೆಟರ್ ಆಗಬಹುದು. ಆ ಹಂತವನ್ನು ತಲುಪುವ ಸಂಪೂರ್ಣ ಸಾಮರ್ಥ್ಯ ಹಾಗೂ ಪರಿಶ್ರಮವನ್ನು ಅವರು ಹೊಂದಿದ್ದಾರೆ” ಎಂದು ಹೇಳಿದ್ದಾರೆ.
Advertisement
Advertisement
ಕೊಹ್ಲಿಯ ಫಿಟ್ನೆಸ್ ಬಗ್ಗೆ ಪ್ರತಿಕ್ರಿಯಿಸಿದ ಸಂಗಕ್ಕಾರ, ನಾನು ಆಟದ ಬಗ್ಗೆ ವಿರಾಟ್ ಉತ್ಸಾಹವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಅವರು ಇನ್ನೂ ಮೈದಾನದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಬಹುದು. ಕೊಹ್ಲಿ ದೈಹಿಕವಾಗಿ, ಮಾನಸಿಕವಾಗಿ ತುಂಬಾ ಪ್ರಬಲರಾಗಿದ್ದಾರೆ. ಹೀಗಾಗಿ ಡಾನ್ ಬ್ರಾಡ್ಮನ್ ನಂತರ ಎರಡನೇ ಶ್ರೇಷ್ಠ ಆಟಗಾರನಾಗಲು ಅವರಿಗೆ ಅವಕಾಶವಿದೆ ಎಂದಿದ್ದಾರೆ.
Advertisement
ಪ್ರಸ್ತುತ ಕ್ರಿಕೆಟ್ನಲ್ಲಿ ಅವರಂತಹ ಆಟಗಾರರು ಬಹಳ ಕಡಿಮೆ ಇದ್ದಾರೆ. ನನ್ನ ವೃತ್ತಿಜೀವನದಲ್ಲಿ ನಾನು ನೋಡಿದ ಎಲ್ಲ ಆಟಗಾರರಲ್ಲಿ ಕೊಹ್ಲಿ ಅತ್ಯುತ್ತಮ ಆಟಗಾರ. ಅವರಲ್ಲಿ ನಾನು ಹೆಚ್ಚು ಇಷ್ಟಪಡುವ ವಿಷಯವೆಂದರೆ ಕ್ರೀಡೆಗಳ ಬಗ್ಗೆ ಅವರ ಉತ್ಸಾಹ. ವಿರಾಟ್ ನಾಯಕನಾಗಿರಲಿ ಅಥವಾ ಆಟಗಾರನಾಗಿರಲಿ ತಂಡವನ್ನು ಗೆಲ್ಲಿಸುವ ಹೋರಾಟದ ವೇಳೆ ಭಾವನೆಗಳನ್ನು ವ್ಯಕ್ತಪಡಿಸಲು ಎಂದಿಗೂ ಹಿಂಜರಿಯುವುದಿಲ್ಲ. ಅವರು ಬ್ಯಾಟಿಂಗ್ ಸಮಯದಲ್ಲಿ ಹೆಚ್ಚು ಅಪಾಯಕಾರಿ ಹೊಡೆತಗಳನ್ನು ತೆಗೆದುಕೊಳ್ಳುವುದಿಲ್ಲ. ಹೀಗಿದ್ದರೂ ಅದು ಪರಿಣಾಮಕಾರಿಯಾಗಿ ಕಾಣುತ್ತದೆ ಎಂದು ಸಂಗಾಕ್ಕರ ಹೊಗಳಿದ್ದಾರೆ.
Advertisement
ಸಂಗಕ್ಕಾರ ಅವರಿಗೂ ಮುನ್ನ ನ್ಯೂಜಿಲೆಂಡ್ ನಾಯಕ ಕೆನ್ ವಿಲಿಯಮ್ಸನ್ ಅವರು ಕೊಹ್ಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. “ವಿರಾಟ್ ವಿರುದ್ಧ ಆಡಲು ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ. ಚಿಕ್ಕ ವಯಸ್ಸಿನಲ್ಲಿಯೇ ಅವರನ್ನು ಭೇಟಿಯಾಗುವುದು ಹಾಗೂ ಕ್ರಿಕೆಟ್ ಜರ್ನಿಯನ್ನು ಹತ್ತಿರದಿಂದ ನೋಡುವುದು ನಿಜಕ್ಕೂ ಅದ್ಭುತವಾಗಿದೆ” ಎಂದಿದ್ದರು.
ಡಾನ್ ಬ್ರಾಡ್ಮನ್ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಎಂದು ಪರಿಗಣಿಸಲಾಗಿದೆ. ಆದಾಗ್ಯೂ ಅವರು ಟೆಸ್ಟ್ ಕ್ರಿಕೆಟ್ ಮಾತ್ರ ಆಡಿದ್ದಾರೆ. ಅದರಲ್ಲೂ ಅವರ ಸರಾಸರಿ 99.94 ಆಗಿದೆ. ಇದನ್ನು ಸಾಧಿಸುವುದು ತುಂಬಾ ಕಷ್ಟ. ಆದರೆ ಟೆಸ್ಟ್ ಕ್ರಿಕೆಟ್ನಲ್ಲಿ ರನ್ಗಳ ವಿಷಯದಲ್ಲಿ ಕೊಹ್ಲಿ ಬ್ರಾಡ್ಮನ್ ಅವರನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ 86 ಟೆಸ್ಟ್ ಪಂದ್ಯಗಳಲ್ಲಿ 53.62 ಸರಾಸರಿಯಲ್ಲಿ 7,240 ರನ್ ಗಳಿಸಿದ್ದಾರೆ.
ವಿರಾಟ್ ಟೆಸ್ಟ್ ನಲ್ಲಿ 27 ಶತಕಗಳನ್ನು ಗಳಿಸಿದ್ದಾರೆ. ಇತ್ತ ಡಾನ್ ಬ್ರಾಡ್ಮನ್ 52 ಟೆಸ್ಟ್ ಗಳಲ್ಲಿ 99.94 ಸರಾಸರಿಯಲ್ಲಿ 6,996 ರನ್ ಗಳಿಸಿದ್ದಾರೆ. ಕೊಹ್ಲಿ ಎಲ್ಲಾ ಮೂರು ಮಾದರಿಯಲ್ಲಿ (ಏಕದಿನ, ಟೆಸ್ಟ್ ಮತ್ತು ಟಿ 20) ಸರಾಸರಿ 50ಕ್ಕಿಂತ ಹೆಚ್ಚು ಹೊಂದಿದ್ದಾರೆ. ಜೊತೆಗೆ ಟೆಸ್ಟ್ ಮತ್ತು ಏಕದಿನ ಪಂದ್ಯಗಳನ್ನು ಒಟ್ಟುಗೂಡಿಸಿ 70 ಶತಕಗಳನ್ನು ಗಳಿಸಿದ್ದಾರೆ.