ಬೆಂಗಳೂರು: ಇಬ್ಬರು ಸೋಂಕಿತರಲ್ಲಿ ಬ್ರಿಟನ್ ಕೊರೊನಾ ವೈರಸ್ ಕಂಡು ಬಂದ ಸಿಲಿಕಾನ್ ಸಿಟಿಯ ಅಪಾರ್ಟ್ಮೆಂಟ್ ಸೀಲ್ಡೌನ್ ಆಗಿದೆ.
ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು.
— Dr Sudhakar K (@mla_sudhakar) December 29, 2020
Advertisement
ಈ ಬಗ್ಗೆ ಡಿಹೆಚ್ ಡಾ. ಸುರೇಶ್ ಪ್ರತಿಕ್ರಿಯಿಸಿ, ಸ್ಥಳೀಯರು ಸಾಂಸ್ಥಿಕ ಕ್ವಾರಂಟೈನ್ ಗೆ ಒಪ್ಪಿರಲಿಲ್ಲ. ಹೀಗಾಗಿ ವಸಂತಪುರದ ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. 14 ದಿನಗಳ ಕಾಲ ಸೀಲ್ ಡೌನ್ ಪ್ರಕ್ರಿಯೆ ನಡೆಯುತ್ತದೆ ಎಂದು ಹೇಳಿದ್ದಾರೆ.
Advertisement
Advertisement
ಅಪಾರ್ಟ್ಮೆಂಟ್ನಲ್ಲಿ ಒಟ್ಟು 39 ನಿವಾಸಿಗಳು ಇದ್ದು ಮೂವರಿಗೆ ಪಾಸಿಟಿವ್ ಬಂದಿದೆ. ಈ ಪೈಕಿ ಇಬ್ಬರಲ್ಲಿ ಹೊಸ ವೈರಸ್ ಬಂದಿದೆ. ಉಳಿದ ನಿವಾಸಿಗಳಿಗೆ ಟೆಸ್ಟ್ ಮಾಡಬೇಕಾದ ಕಾರಣ ಅಪಾರ್ಟ್ಮೆಂಟ್ ಸೀಲ್ಡೌನ್ ಮಾಡಲಾಗಿದೆ ಎಂದು ತಿಳಿಸಿದರು.
Advertisement
ಅಪಾರ್ಟ್ಮೆಂಟ್ ಇರುವ ರಸ್ತೆಯನ್ನು ಪಟ್ಟಿ ಕಟ್ಟಿ ಸಂಚಾರವನ್ನು ಬಂದ್ ಮಾಡಲಾಗಿದೆ. ಬಿಬಿಎಂಪಿ ಈಗಾಗಲೇ ರಸ್ತೆಯನ್ನು ಸ್ಯಾನಿಟೈಸ್ ಮಾಡಿದೆ.ಆರಂಭದಲ್ಲಿ 28 ದಿನಗಳ ಕಾಲ ಸೀಲ್ಡೌನ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಈಗ 14 ದಿನಗಳ ಕಾಲ ಸೀಲ್ಡೌನ್ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.