ಬೆಂಗಳೂರು: ಬ್ಲ್ಯಾಕ್ ಫಂಗಸ್ಗೆ ನೀಡುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೇ ಬೌರಿಂಗ್ ಆಸ್ಪತ್ರೆಯಲ್ಲಿ 11 ವರ್ಷದ ಬಾಲಕ ಬಲಿಯಾಗಿದ್ದಾನೆ.
ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕಿನ ನಿವಾಸಿಯಾಗಿದ್ದ ಬಾಲಕನಿಗೆ ಕೋವಿಡ್ ಬಂದಿತ್ತು. ಕೊರೊನಾದಿಂದ ಗುಣಮುಖವಾದ ನಂತರ ಬಹು ಅಂಗಾಗ ಸಮಸ್ಯೆಯಿಂದ ಬಾಲಕ ಬಳಲುತ್ತಿದ್ದ.
Advertisement
Advertisement
ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ಆತನನ್ನು ಶಿಫ್ಟ್ ಮಾಡಲಾಗಿತ್ತು.
Advertisement
ಇಂದಿರಾಗಾಂಧಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪ್ರಾರಂಭಿಸಿದಾಗ ಬ್ಲ್ಯಾಕ್ ಫಂಗಸ್ ಇರುವುದು ಪತ್ತೆಯಾಗಿದೆ. ಬಳಿಕ ಇಂದಿರಾ ಗಾಂಧಿಯಿಂದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ನಿಶ್ಚಿತಾರ್ಥವಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ಯುವತಿ
Advertisement
ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ಬಹು ಅಂಗಾಗ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ಈಗ ಆತಂಕ ಮೂಡಿಸಿದೆ. ಹಾಗಾಗಿ ಪೋಷಕರು ಎಚ್ಚರ ವಹಿಸಿ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳಲ್ಲಿ ಚಿಕ್ಕಪುಟ್ಟ ಸಮಸ್ಯೆ ಕಾಣಿಸಿಕೊಂಡರೂ ಡಾಕ್ಟರ್ ಬಳಿ ಕರೆದೊಯ್ದು ಚಿಕಿತ್ಸೆ ಕೊಡಿಸುವುದು ಸೂಕ್ತ ಎಂದು ತಜ್ಞರು ಎಚ್ಚರಿಕೆಯ ಸಲಹೆ ನೀಡಿದ್ದಾರೆ.