ಬೆಂಗಳೂರು: ಭಂಡತನಕ್ಕೆ ಕೊನೆಯುಂಟೆ? ಮಾಡಿದ್ದುಣ್ಣೋ ಮಹಾರಾಯ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಆಪ್ತರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದು, ಶೋಧ ಕಾರ್ಯ ಚುರುಕುಗೊಳಿಸಿದೆ. ಇತ್ತ ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಪ್ರೇರಿತ ದಾಳಿಯಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೂ ಕೈ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಸಿಬಿಐ ದಾಳಿ ವೇಳೆ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿಕ್ಕ 50 ಲಕ್ಷ ರೂ. ಹಣವನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಿ.ಟಿ.ರವಿ ಅವರು ಹೆಸರು ಹೇಳದೇ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಟ್ರಬಲ್ ಶೂಟರ್ ಇಂದು ಸಿಬಿಐಗೆ ಲಾಕ್ ಆಗಿದ್ದು ಹೇಗೆ?
Advertisement
ಭಂಡತನಕ್ಕೆ ಕೊನೆಯುಂಟೆ?
ಮಾಡಿದ್ದುಣ್ಣೋ ಮಹಾರಾಯ.
ವೇದ ಸುಳ್ಳಾದರೂ ಗಾದೆ ಸುಳ್ಳಾಗದು.
— C T Ravi ???????? ಸಿ ಟಿ ರವಿ (@CTRavi_BJP) October 5, 2020
Advertisement
ಇಂಧನ ಇಲಾಖೆಯಲ್ಲಿರುವಾಗ ಡಿಕೆಶಿಯವರ ಒಟ್ಟು 60 ಕೋಟಿ ಅಕ್ರಮ ಹಣದ ವಹಿವಾಟಿನ ಬಗ್ಗೆ ಇಡಿ ಹಾಗೂ ಐಟಿ ಲೆಕ್ಕ ಹಾಕಿದೆ. ವಿದ್ಯುತ್ ಇಲಾಖೆಯಲ್ಲಿ ಏಜೆನ್ಸಿ ಮೂಲಕ ಭಾರೀ ಅಕ್ರಮ ಹಣ ವಹಿವಾಟಿನ ಆರೋಪ ಇದ್ದು, ಇದಕ್ಕೆ ಪೂರಕ ಸಾಕ್ಷಿಯನ್ನು ಇಡಿ ಹಾಗೂ ಐಟಿ ಇಲಾಖೆ ಕಲೆ ಹಾಕಿವೆ. ಅದರ ಆಧಾರದ ಮೇಲೆ ಇಂದು ಸಿಬಿಐ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಡಿಕೆಶಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ಹೈಡ್ರಾಮಾ
Advertisement
Advertisement
ಸಿಬಿಐ ದಾಳಿ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸುಧಾಕರ್, ರಾಜಕೀಯ ಪ್ರೇರಿತ ದಾಳಿ ಆಗಿದ್ರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾರ್ಗೆಟ್ ಆಗುತ್ತಿದ್ದರು. ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಈ ಹಿಂದೆಯೂ ದಾಳಿಗಳು ನಡೆದಿದ್ದು, ಪ್ರಕರಣಗಳ ಮುಂದುವರಿದ ರೈಡ್ ಇದಾಗಿರಬಹುದು. ದಾಳಿ ಯಾಕಾಯ್ತು? ಹೇಗೆ ಆಯ್ತು ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಸಿದ್ದರಾಮಯ್ಯನವರಿಗಿಂತ ಡಿ.ಕೆ.ಶಿವಕುಮಾರ್ ದೊಡ್ಡ ನಾಯಕ ಅಲ್ಲ. ಹಾಗಾಗಿ ಇದು ರಾಜಕೀಯ ದುರುದ್ದೇಶ ಹೊಂದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಡಿಕೆಶಿ ಮನೆಯಲ್ಲಿದ್ದ 50 ಲಕ್ಷ ಹಣ ಸೀಜ್?