ನವದೆಹಲಿ: ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಅತ್ಯಂತ ಖಂಡನೀಯ ಮತ್ತು ಇದೊಂದು ಪೂರ್ವ ನಿಯೋಜಿತ ದಾಳಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನಿನ್ನೆ ರಾತ್ರಿ ಪುಲಿಕೇಶಿ ನಗರ ವಿಧಾನ ಸಭಾ ಕ್ಷೇತ್ರದ, ಕೆ.ಜಿ ಹಳ್ಳಿ, ಡಿ. ಜಿ ಹಳ್ಳಿ ಹಾಗೂ ಪುಲಿಕೇಶಿ ನಗರದಲ್ಲಿ ದಾಂಧಲೆಯನ್ನು ಎಬ್ಬಿಸಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡಿದ್ದು ಸಮಾಜದ ಸಾಮರಸ್ಯವನ್ನು ಕದಡಲು ಪ್ರಯತ್ನಿಸಿರುವುದಕ್ಕೆ ಪ್ರತ್ಯಕ್ಷ ಸಾಕ್ಷಿ. pic.twitter.com/ueRrfrtJyt
— Pralhad Joshi (@JoshiPralhad) August 12, 2020
Advertisement
ಮಂಗಳವಾರ ರಾತ್ರಿ ಕಾವಲಬೈರಸಂದ್ರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡುತ್ತಾ ಘಟನೆಯನ್ನು ವಿರೋಧಿಸಿದರು. ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕಾನೂನು ಅಡಿ ದೂರು ದಾಖಲಿಸಬೇಕಿತ್ತು ಆದರೆ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದರು.
Advertisement
ಬೆಂಗಳೂರಿನ ಪುಲಕೇಶಿನಗರದ ಶಾಸಕರಾದ ಶ್ರೀ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸದ ಮೇಲೆ ಹಾಗೂ ಪೊಲೀಸರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ಮಾಡಿರುವುದು ಖಂಡನೀಯ. ಇದು ಪೂರ್ವನಿಯೋಜಿತ ಆಗಿರಬಹುದು.
ಉದ್ದೇಶಪೂರ್ವಕವಾಗಿ ಸಮಾಜದಲ್ಲಿ ಶಾಂತಿ ಕದಡಲು ಈ ಸಂಚು ನಡೆದಿದೆ. ಇಂತಹ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
— Pralhad Joshi (@JoshiPralhad) August 12, 2020
Advertisement
ಪೊಲೀಸ್ ಠಾಣೆಯಿಂದ ಹಿಡಿದು ಸರ್ಕಾರಿ ವಾಹನ ಹಾಗೂ ಬಡ ಜನರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಎಲ್ಲದಕ್ಕೂ ಬೆಂಕಿ ಹಚ್ಚಿರುವುದು ಆಕ್ಷಮ್ಯ ಅಪರಾಧ. ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜೊತೆಗೆ ಮಾತನಾಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದೇನೆ. ಈಗ ತೆಗೆದುಕೊಳ್ಳುವ ಕ್ರಮ ಮುಂದಿನ ದಿನಗಳಲ್ಲಿ ಮಾದರಿಯಾಗಿರಬೇಕು ಹಾಗೇ ತಪ್ಪಿತಸ್ಥರಿಗೆ ಪಾಠಕಲಿಸುವಂತೆ ಮನವಿ ಮಾಡಿದ್ದೇನೆ ಎಂದರು.
Advertisement
#WATCH Karnataka: A group of Muslim youth gathered and formed a human chain around a temple in DJ Halli police station limits of Bengaluru city late last night, to protect it from arsonists after violence erupted in the area. (Video source: DJ Halli local) pic.twitter.com/dKIhMjQh96
— ANI (@ANI) August 12, 2020
ಧಾರ್ಮಿಕ ಮುಖಂಡರು ಕೂಡ ಈ ರೀತಿ ಘಟನೆಗಳನ್ನು ವಿರೋಧಿಸಬೇಕು ಆಗ ಮಾತ್ರವೇ ಸಮಾನತೆ ಮತ್ತು ಏಕತೆ ಕಾಪಡಲು ಸಾಧ್ಯ.ಪೊಲೀಸರು ಉತ್ತಮ ಕೆಲಸ ಮಾಡಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಜೋಶಿ ಹೇಳಿದರು.