ಅಯೋಧ್ಯೆ: ಶ್ರೀರಾಮ ಹುಟ್ಟಿ ಬೆಳೆದ ಅಯೋಧ್ಯೆ ಈಗ ಜಗಮಗಿಸುತ್ತಿದೆ. ಬಾಲರಾಮ ಆಡಿ ಬೆಳೆದ ಊರಲ್ಲಿ ಗತವೈಭವ ಮರುಕಳಿಸಿದೆ.ಕೋಟ್ಯಂತರ ಜನ ಕಾಯುತ್ತಿದ್ದ ಆ ಶುಭಗಳಿಗೆಗೆ ಕ್ಷಣಗಣನೆ ಶುರುವಾಗಿದೆ.
ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ಅಯೋಧ್ಯೆಗೆ ಆಗಮಿಸಲಿದ್ದಾರೆ. ಸುಮಾರು 2-3 ಗಂಟೆ ಮೋದಿಯವರು ಅಯೋಧ್ಯೆಯಲ್ಲಿ ಇರಲಿದ್ದಾರೆ.
Advertisement
Advertisement
ಬುಧವಾರ ಬೆಳಗ್ಗೆ 11.15ಕ್ಕೆ ಸಾಕೇತ್ ಕಾಲೇಜ್ನ ಹೆಲಿಪ್ಯಾಡ್ಗೆ ಮೋದಿ ಆಗಮಿಸಲಿದ್ದಾರೆ. ಹೆಲಿಪ್ಯಾಡ್ನಿಂದ ನೇರವಾಗಿ ಹನುಮಾನ್ ಗಡಿಗೆ ತೆರಳಲಿದ್ದಾರೆ. ಹನುಮಾನ್ ಗಡಿಯಲ್ಲಿ 7 ನಿಮಿಷಗಳ ಕಾಲ ಪೂಜೆಯಲ್ಲಿ ಭಾಗಿಯಾದ ಬಳಿಕ ರಾಮಜನ್ಮಭೂಮಿಗೆ ಗೇಟ್ ನಂ.3ರ ಮೂಲಕ ಆಗಮಿಸಲಿದ್ದಾರೆ.
Advertisement
ರಾಮ್ಲಲ್ಲಾ ದರ್ಶನ ಮಾಡಿ 15 ನಿಮಿಷಗಳ ಕಾಲ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ರಾಮ್ಲಲ್ಲಾ ದರ್ಶನ ಮಾಡುವ ಮೊದಲ ಪ್ರಧಾನಿ ಎಂಬ ಖ್ಯಾತಿಗೆ ಪಾತ್ರವಾಗಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಭೂಮಿಪೂಜೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ 40 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯನ್ನು ಇಡುವ ಮೂಲಕ ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
Advertisement
25 ನಿಮಿಷಗಳ ಕಾಲ ನಡೆಯಲಿರುವ ಪೂಜೆ ನಡೆಯಲಿದ್ದು, ಭೂಮಿ ಪೂಜೆ ಬಳಿಕ 45 ನಿಮಿಷ ಮೋದಿ ಭಾಷಣ ಮಾಡಲಿದ್ದಾರೆ. ಇದಾದ ಬಳಿಕ ಸರಯೂ ನದಿ ಬಳಿ ಮೋದಿ ತೆರಳಲಿದ್ದಾರೆ. ಒಟ್ಟು 2 ಗಂಟೆ 15 ನಿಮಿಷಕ್ಕೂ ಅಧಿಕ ಕಾಲ ಅಯೋಧ್ಯೆಯಲ್ಲಿ ಮೋದಿ ಇರಲಿದ್ದಾರೆ.