ತುಮಕೂರು: ಭೂ ಸುಧಾರಣೆ ಕಾಯಿದೆ ತಿದ್ದುಪಡಿ ರೈತರಿಗೆ ಮರಣ ಶಾಸನವಾಗಿದೆ. ಈ ಬಗ್ಗೆ ಸಂಸತ್ತಿನಲ್ಲಿ ನಿಂತು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.
ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ಡಿಸಿ ಕಚೇರಿ ಎದುರು ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾದರು. ಬಳಿಕ ಮಾತನಾಡಿದ ಅವರು, ತುಮಕೂರಿನಲ್ಲಿ ಸೋತಿದ್ದೇನೆ. ಆದರೂ ರಾಜ್ಯಸಭೆಗೆ ಹೋಗುವ ಅವಕಾಶ ಸಿಕ್ಕಿದೆ. ರಾಜ್ಯಸಭೆಯಲ್ಲಿ ಯಾರ ದಾಕ್ಷಿಣ್ಯಕ್ಕೂ ಒಳಗಾಗದೇ ಕಾಯಿದೆ ವಿರುದ್ಧ ಹೋರಾಟ ಮಾಡುತ್ತೆನೆ ಎಂದರು.
Advertisement
Advertisement
ಇಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಜೆಡಿಎಸ್ ಪಕ್ಷ ಈ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಇಂತಹ ಕೆಟ್ಟ ಕಾನೂನು ರೈತರ ಶೋಷಣೆ ಮಾಡುತ್ತಿದ್ದು, ಇದ್ದೋರು ಭೂಮಿ ಖರಿದಿಸುವ ಹಾಗಾಗಿದೆ ಎಂದು ಕೇಂದ್ರದ ವಿರುದ್ಧ ದೇವೇಗೌಡರು ಗುಡುಗಿದರು.
Advertisement
ಪ್ರತಿಭಟನೆಗೂ ಮುನ್ನ ತುಮಕೂರಿನ ಜೆಡಿಎಸ್ ಕಚೇರಿಯಲ್ಲಿ ಶಿರಾ ಶಾಸಕ ದಿವಂಗತ ಸತ್ಯನಾರಾಯಣ್ ಗೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು.