ಬೆಂಗಳೂರು: ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಎಂದು ಪ್ರಶ್ನಿಸಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾದೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬಿಎಸ್ವೈ ಅವರೇ ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ. ಸ್ವತಃ ಬಿಜೆಪಿ ಶಾಸಕರೇ ಯಡಿಯೂರಪ್ಪನವರ ಕುಟುಂಬ ಸರ್ಕಾರದ ಖಜಾನೆಯನ್ನು ಲೂಟಿ ಮಾಡುತ್ತಿದೆ ಅಂದಿದ್ದಾರೆ, ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
Advertisement
ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾಧೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ @JPNadda ಅವರಿಗೆ @BSYBJP ಅವರೇ ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ.
ಸ್ವತಃ ಬಿಜೆಪಿ ಶಾಸಕರೇ ಯಡಿಯೂರಪ್ಪನವರ ಕುಟುಂಬ ಸರ್ಕಾರದ ಖಜಾನೆಯನ್ನು ಲೂಟಿ ಮಾಡುತ್ತಿದೆ ಅಂದಿದ್ದಾರೆ, ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? 4/4#ಹುಬ್ಬಳ್ಳಿ
— Siddaramaiah (@siddaramaiah) July 26, 2021
Advertisement
ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ಆಡಳಿತ ಪಕ್ಷದ ವಿರೋದ್ಧವಾಗಿ ಆಕ್ರೋಶ ಹೊರಹಾಕಿದ್ದಾರೆ.
Advertisement
ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ @BJP4Karnataka ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ. 3/4#ಹುಬ್ಬಳ್ಳಿ
— Siddaramaiah (@siddaramaiah) July 26, 2021
Advertisement
ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.