– ಕರಾವಳಿಯಲ್ಲಿಯ ಭಯೋತ್ಪಾದನಾ ಚಟುವಟಿಕೆಗಳ ಸರಿಯಾದ ತನಿಖೆಗೆ ಆಗ್ರಹ
ಬೆಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಅವರ ಇನ್ನಷ್ಟು ಹೆಚ್ಚಿನ ತನಿಖೆಗೆ ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ ಎನ್ಐಎ ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಂಚಾಲಕ ಕೆ.ಆರ್ ಸುನಿಲ್ ಒತ್ತಾಯಿಸಿದ್ದಾರೆ.
ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರ ಅಬ್ದುಲ್ ರಹಿಮಾನ್ ಬಾಷಾ ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ನಂಟು ಇರುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಷಾ ಅವರ ಮಾಸ್ತಿಕಟ್ಟೆಯಲ್ಲಿರುವ ಮನೆಗೂ ಎನ್ಐಎ ತಂಡ ದಾಳಿ ನಡೆಸಿ ದಿನವಿಡೀ ತನಿಖೆ ನಡೆಸಿತ್ತು. ಈ ವಿದ್ಯಾಮಾನದಿಂದ ಇಡೀ ಜಿಲ್ಲೆ ಹಾಗೂ ರಾಜ್ಯ ಆತಂಕಕ್ಕೆ ಒಳಗಾಗಿದೆ. ಅಲ್ಲದೆ ಐಸಿಸ್ ಉಗ್ರ ಸಂಘಟನೆಗೆ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಬಾಷಾ ಅವರ ಕಿರಿಯ ಮಗ ಅಮ್ಮರ್ ಅಬ್ದುಲ್ ರೆಹಮಾನ್ ನ್ನು ವಶಕ್ಕೆ ಪಡೆದು ತೆರಳಿದ್ದರು.
Advertisement
Advertisement
ಬಂಧಿತ ಆರೋಪಿ ಅಮ್ಮರ್ ರೆಹಮಾನ್ ಬಗ್ಗೆ ವಿಶೇಷ ತನಿಖೆ ನೆಡೆಸಬೇಕು. ಆತನ ಜೊತೆ ಕೈ ಜೋಡಿಸಿದವರ ಮತ್ತು ಆತನ ನಂಟಿನ ಬಗ್ಗೆ ಪತ್ತೆ ಹಚ್ಚಬೇಕು. ಏಕೆಂದರೆ ಕಳೆದ ಕೆಲವು ವರ್ಷಗಳಿಂದ ದೇಶದ ಯಾವುದೇ ಮೂಲೆಯಲ್ಲಿ ಉಗ್ರರ ಬಂಧನವಾದರೂ ಆ ಉಗ್ರರ ಜೊತೆಗೆ ಮಂಗಳೂರಿನ ನಂಟು ಕಂಡುಬರುತ್ತದೆ ಎಂದು ಸುನಿಲ್ ಆಗ್ರಹಿಸಿದ್ದಾರೆ.
Advertisement
ನಿನ್ನೆ ಎನ್ಐಎ ದಾಳಿ ನಡೆಸಿದ ಬಾಷಾ ಅವರ ಮನೆ ಸೊಸೆ ಮತಾಂತರಕೊಂಡ ಹಿಂದೂ ಯುವತಿಯಾಗಿದ್ದು, ಆಕೆಯು ಸಹ ಕ್ರೋನಿಕಲ್ ಪೌಂಡೇಶನ್ ಎನ್ನುವ ಇನ್ ಸ್ಟ್ರಾಗ್ರಾಮ್ ಪೇಜ್ ನಲ್ಲಿ ಐಸಿಸ್ ಪರ ಅಜೆಂಡಾ ಹರಡುತ್ತಿದ್ದ ಆರೋಪ ಕೇಳಿ ಬಂದಿದೆ. ಇದು ಒಂದು ಲವ್ ಜಿಹಾದ್ ಪ್ರಕರಣ ಹಿಂದೂ ಯುವತಿಯರನ್ನು ಪ್ರೀತಿಯ ಹೆಸರಲ್ಲಿ ಮದುವೆಯಾಗಿ ಮತಾಂತರ ಮಾಡಿ ಉಗ್ರ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಾ ಇದ್ದಾರೆ ಈ ಬಗ್ಗೆಯೂ ತನಿಖೆಯಾಗಬೇಕು. ಇದನ್ನೂ ಓದಿ: ಉಗ್ರರ ಜೊತೆ ನಂಟು ಶಂಕೆ – ಮಾಜಿ ಶಾಸಕ ಇದಿನಬ್ಬ ಮಗನ ಮನೆ ಮೇಲೆ ಎನ್ಐಎ ದಾಳಿ
Advertisement
ಭಟ್ಕಳ ಸಹೋದರರು ಇಲ್ಲಿಯೇ ನಂಟು ಹೊಂದಿದ್ದರು. ರಿಯಾಜ್ ಭಟ್ಕಳ್ ತೊಕ್ಕೊಟ್ಟಿನಲ್ಲಿ ಸಿಕ್ಕಿಬಿದ್ದ ಸಂದರ್ಭ ಬಾಂಬ್ ತಯಾರಿಯಯಲ್ಲಿ ತೊಡಗಿಕೊಂಡ ವ್ಯಕ್ತಿಯೊಬ್ಬನನ್ನ ಮುಕ್ಕಚೇರಿಯಿಂದ ಬಂಧಿಸಲಾಗಿತ್ತು. ಕಳೆದ ಹಲವು ವರ್ಷಗಳಿಂದ ಪಕ್ಕದ ರಾಜ್ಯ ಕೇರಳದ ಬಹುತೇಕ ಮುಸ್ಲಿಂ ಯುವಕರು ಸಿರಿಯಾ ಐಸಿಸ್ ಸಂಘಟನೆ ಸೇರಿದ್ದು ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದ್ದಾರೆ. ತಕ್ಷಣ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ತನಿಖೆ ನಡೆಸಬೇಕು. ಅಲ್ಲದೆ ಮಂಗಳೂರಿನಲ್ಲಿ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಉಗ್ರರ ಪರ ಗೋಡೆಬರಹ ಬರೆದ ಶಂಕಿತ 3 ಉಗ್ರರ ಬಂಧನವಾಗಿತ್ತು. ಈ ಬಗ್ಗೆ ಕೂಡ ತನಿಖೆ ಆಗಬೇಕು. ಮತ್ತು ಇಲ್ಲಿನ ಸ್ಥಳೀಯರು ಅಂತಹವರಿಗೆ ಸಹಕಾರ ನೀಡುತ್ತಿರುವ ಬಗ್ಗೆ ಸಾಕಷ್ಟು ಅನುಮಾನ ಗಳಿದ್ದು ಆ ವ್ಯಕ್ತಿಗಳನ್ನು ಕೂಡ ಪತ್ತೆ ಹಚ್ಚಿ ಬಂಧಿಸಬೇಕು.
ಜಾಗತಿಕ ಮಟ್ಟದಲ್ಲಿ ಬೇರೂರಿರುವ ಭಯೋತ್ಪಾದನೆ ಚಟುವಟಿಕೆಯು ಕರಾವಳಿ ಜಿಲ್ಲೆಗಳಲ್ಲಿ ನೆಲೆಕಾಣಲು ಪ್ರಯತ್ನಿಸುತ್ತಿರುವುದಕ್ಕೆ ಇದು ಸಾಕ್ಷಿಯಾಗಿದ್ದು ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಆಮೂಲಾಗ್ರ ತನಿಖೆ ನಡೆಸಬೇಕೆಂದು ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ ಎನ್ಐಎ ಕಚೇರಿಯನ್ನು ಸ್ಥಾಪಿಸಬೇಕು ಎಂದು ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಂಚಾಲಕ ಕೆ.ಆರ್.ಸುನೀಲ್ ಆಗ್ರಹಿಸಿದ್ದಾರೆ.