ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು.
ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ 32 ಬೆಡ್ ಗಳ ಹೈಟೆಕ್ ಐಸಿಯು ಉದ್ಘಾಟನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಬಡವರಿಗೂ ಒಳ್ಳೆಯ ಹೈಟೆಕ್ ವ್ಯವಸ್ಥೆ ಸರ್ಕಾರ ಮಟ್ಟದಲ್ಲೇ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆ ಸೇರಿದಂತೆ ನಾಯಕರ ಟ್ವಿಟ್ಟರ್ ಖಾತೆ ಬ್ಲಾಕ್
Advertisement
ಮಂಗಳೂರು ನಗರದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿ @BSBommai ರವರು ಇಂದು ಉದ್ಘಾಟಿಸಿದರು. (1/2)#KarnatakaFightsCorona pic.twitter.com/v3AhfUidVy
— CM of Karnataka (@CMofKarnataka) August 12, 2021
Advertisement
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ