– ರನ್ ವೇ ಬಫರ್ ಜೋನ್ ಕಡಿಮೆಯಿದೆ
– ಇದು ಕೊಲೆಗೆ ಸಮನಾದ ಕ್ರಿಮಿನಲ್ ಕೃತ್ಯ
ಚೆನ್ನೈ: ಮಂಗಳೂರು ವಿಮಾನ ದುರಂತದ ಬಳಿಕ ನಾನು ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲೂ ಅಪಾಯವಾಗಬಹುದು ಎಂದು ವರದಿಯಲ್ಲಿ ಎಚ್ಚರಿಕೆ ನೀಡಿದ್ದೆ. ಆದರೆ ನನ್ನ ಎಚ್ಚರಿಕೆಯನ್ನು ನಿರ್ಲಕ್ಷಿಸಲಾಯಿತು ಎಂದು ವಾಯು ಸುರಕ್ಷಾ ತಜ್ಞ, ಕ್ಯಾಪ್ಟನ್ ಮೋಹನ್ ರಂಗನಾಥನ್ ಹೇಳಿದ್ದಾರೆ.
Advertisement
ಕಲ್ಲಿಕೋಟೆ ವಿಮಾನ ದುರಂತದ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಕಲ್ಲಿಕೋಟೆ ವಿಮಾನ ನಿಲ್ದಾಣ ಟೇಬಲ್ ಟಾಪ್ ಆಗಿದ್ದು, ರನ್ವೇಯ ಬಫರ್ ಜೋನ್ ಬಹಳ ಕಡಿಮೆಯಿದೆ. ನಿಯಮಗಳ ಪ್ರಕಾರ ರನ್ವೇ ಕೊನೆಯಲ್ಲಿ 240 ಮೀಟರ್ ಉದ್ದದ ಬಫರ್ ಜೋನ್ ಇರಬೇಕು. ಆದರೆ ಇಲ್ಲಿ ಕೇವಲ 90 ಮೀಟರ್ ಉದ್ದವಿದೆ. ಇನ್ನೊಂದು ಬದಿಯಲ್ಲಿ 100 ಮೀಟರ್ ಇರಬೇಕಿತ್ತು. ಆದರೆ ಇಲ್ಲಿ ಕೇವಲ 75 ಮೀಟರ್ ಇದೆ ಎಂದು ಹೇಳಿದರು.
Advertisement
Advertisement
ವಿಮಾನ ನಿಲ್ದಾಣದಲ್ಲಿ ವಿಮಾನಗಳು ಲ್ಯಾಂಡ್ ಆಗುವಾಗ ಏನಾದರೂ ದೋಷ ಉಂಟಾದರೆ ಅಥವಾ ನಿಗದಿತ ಜಾಗದಲ್ಲಿ ಲ್ಯಾಂಡ್ ಆಗದೇ ಮುಂದಕ್ಕೆ ಹೋಗಿ ಲ್ಯಾಂಡ್ ಆದಾಗ ವಿಮಾನ ರನ್ವೇಗಿಂತಲೂ ಮುಂದಕ್ಕೆ ಸಾಗುತ್ತದೆ. ರನ್ವೇಗಿಂತಲೂ ವಿಮಾನ ಮುಂದಕ್ಕೆ ಹೋದಾಗ ಅಪಾಯ ಆಗದೇ ಇರಲು ಬಫರ್ ಜೋನ್ ನಿರ್ಮಿಸಲಾಗುತ್ತದೆ. ಈ ವಲಯವನ್ನು ರನ್ವೇ ರೀತಿಯಾಗಿ ನಿರ್ಮಿಸುತ್ತಾರೆ. ಆದರೆ ರನ್ವೇಯಲ್ಲಿ ಇರುವಂತೆ ಮಧ್ಯದಲ್ಲಿ ಯಾವುದೇ ಬಿಳಿಯಾದ ಪಟ್ಟಿಗಳು ಇರುವುದಿಲ್ಲ.
Advertisement
ಮಳೆ ಬಂದಾಗ ಟೇಬಲ್ ಟಾಪ್ ವಿಮಾನ ನಿಲ್ದಾಣದಲ್ಲಿ ಇಳಿಸಲು ಸರಿಯಾದ ಮಾರ್ಗಸೂಚಿಗಳು ಇಲ್ಲ. ಈ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ರನ್ವೇಯಲ್ಲಿ ಯಾವುದೇ ಸುರಕ್ಷತಾ ಜಾಗವಿಲ್ಲ. 9 ವರ್ಷದದ ಹಿಂದೆಯೇ ಈ ಬಗ್ಗೆ ವರದಿ ನೀಡಿ ಎಚ್ಚರಿಕೆ ನೀಡಿದ್ದೆ. ಆದರೆ ಅವರು ವಿಮಾನ ನಿಲ್ದಾಣಕ್ಕೆ ಯಾವುದೇ ಅಪಾಯವಿಲ್ಲ. ಸುರಕ್ಷಿತವಾಗಿದೆ ಎಂದು ಹೇಳಿದರು ಎಂದು ರಂಗನಾಥನ್ ತಿಳಿಸಿದರು.
ಇಲ್ಲಿ ದುರಂತ ಸಂಭವಿಸಿ ಸಾವನ್ನಪ್ಪಿದ್ದರೆ ಇದು ಕೊಲೆಗೆ ಸಮನಾದ ಕ್ರಿಮಿನಲ್ ಕೃತ್ಯ. ಈ ವಿಮಾನ ನಿಲ್ದಾಣ ಎರಡು ಬದಿಗಳಲ್ಲಿ 200 ಅಡಿ ಆಳದ ಕಣಿವೆಯಿದೆ. ವಿಮಾನಯಾನ ಸಂಸ್ಥೆಗಳು ಇಲ್ಲಿ ಕುರುಡಾಗಿ ವರ್ತಿಸುತ್ತದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಈ ಬಗ್ಗೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
ಎತ್ತರ ಪ್ರದೇಶದಲ್ಲಿ ಇರುವ ಕಾರಣ ಅಪಾಯವಾಗಬಹುದು ಎಂಬ ಕಾರಣಕ್ಕೆ ಕೆಲ ಅಂತರಾಷ್ಟ್ರೀಯ ವಿಮಾನಯಾನ ಕಂಪನಿಗಳು ಇಲ್ಲಿ ದೊಡ್ಡ ವಿಮಾನಗಳ ಲ್ಯಾಂಡಿಂಗ್ ನಿಲ್ಲಿಸಿದ್ದವು. ಬೋಯಿಂಗ್ 777, ಏರ್ಬಸ್ ಎ330ಗಳು ರನ್ವೇ ಕಡಿಮೆಯಿದೆ ಎಂಬ ಕಾರಣ ನೀಡಿ ಈ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಿದ್ದವು.
ಕಲ್ಲಿಕೋಟೆ ರನ್ವೇ 2,860 ಮೀಟರ್ ಉದ್ದವಿದೆ. ದೇಶದಲ್ಲಿ ಅತಿ ಉದ್ದವಿರುವ ದೆಹಲಿ ವಿಮಾನ ನಿಲ್ದಾಣದ ರನ್ವೇ 4,430 ಮೀಟರ್ ಉದ್ದವಿದೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್ ಸಾಠೆ 2 ಬಾರಿ ಲ್ಯಾಂಡಿಗ್ಗೆ ಪ್ರಯತ್ನಿಸಿದ್ರು