ಮಂಡ್ಯ: ಸಂಸತ್ನಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಸಚಿವ ಮುರುಗೇಶ್ ನಿರಾಣಿ ಅವರೊಂದಿಗೆ ಮಂಡ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿದರು.
Advertisement
ಮೊದಲು ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಸಮೀಪ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದರು. ಈ ವೇಳೆ ದಿಲೀಪ್ ಕನ್ಸ್ಟ್ರಕ್ಷನ್ ಅವರು ನಡೆಸುತ್ತಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅವರು ಅಧಿಕಾರಿಗಳ ಬಳಿ ಇದ್ದ ಮಾಹಿತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಗೆ ನೀಡಲು ಸೂಚನೆ ನೀಡಿದರು. ಬಳಿಕ ದಿಲೀಪ್ ಕನ್ಸ್ಟ್ರಕ್ಷನ್ ಅವರು ಅಕ್ರಮವಾಗಿ ಮಾಡಿರುವ ಗಣಿಗಾರಿಕೆಯ ವರದಿ ತೆಗೆದುಕೊಂಡು ಅವರಿಗೆ ದಂಡ ವಿಧಿಸುವುದಾಗಿ ಮುರುಗೇಶ್ ನಿರಾಣಿ ಅವರು ತಿಳಿಸಿದರು. ಅಲ್ಲದೇ ರಾಜಧನ ಪಾವತಿ ಮಾಡದವರ ವಿರುದ್ಧ ಕ್ರಮಕೈಗೊಂಡು ಅವರಿಂದ ರಾಜಧನ ವಸೂಲಿ ಮಾಡುವುದಾಗಿ ಅವರು ತಿಳಿಸಿದರು.
Advertisement
Advertisement
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ನಾನು ಸಂಸದೆ ಆದಾಗಿನಿಂದ ಮಂಡ್ಯ ಜಿಲ್ಲೆಯಾದ್ಯಂತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುತ್ತಿದ್ದೇನೆ. ನನ್ನ ಉದ್ದೇಶ ನನ್ನ ಜನರಿಗೆ ಹಾಗೂ ರೈತರಿಗೆ ಅನ್ಯಾಯವಾಗ ಬಾರದು, ನಾನು ಅಭಿವೃದ್ಧಿಯ ಪರವಾಗಿ ಇದ್ದೇನೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು. ಆದರೆ ಮಂಡ್ಯ ಜಿಲ್ಲೆಯಲ್ಲಿ ಕೆಲವು ಕಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಇದರಿಂದಾಗಿ ರೈತರಿಗೆ ಅನ್ಯಾಯವಾಗುತ್ತಿದೆ. ಅದಕ್ಕಾಗಿ ನಾನು ಈ ಬಗ್ಗೆ ಸಚಿವರಾದ ಮುರುಗೇಶ್ ನಿರಾಣಿ ಅವರಿಗೆ ಹೇಳಿದ್ದೆ. ಅದರಂತೆ ಇಂದು ಅವರೊಂದಿಗೆ ಬಂದು ಪರಿಶೀಲನೆ ಮಾಡುತ್ತಿರುವುದಾಗಿ ತಿಳಿಸಿದರು.
Advertisement