– ಐದು ಬಾರಿ ಕುತ್ತಿಗೆ, ತಲೆ, ಕಾಲು, ಹೊಟ್ಟೆ ಭಾಗಕ್ಕೆ ಹಲ್ಲೆ
ಬೆಂಗಳೂರು: ಮದುವೆ ನಿಗದಿಯಾಗಿದ್ದಕ್ಕೆ ಕೋಪಗೊಂಡ ಯುವನೋರ್ವ ತಾನು ಪ್ರೀತಿಸಿದ ಹುಡುಗಿಗೆ ಐದು ಬಾರಿ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಕೊಲೆಗೆ ಪ್ರಯತ್ನ ಮಾಡಿದ ಪಾಗಲ್ ಪ್ರೇಮಿಯನ್ನು ಗಿರೀಶ್ ಎಂದು ಗುರುತಿಸಲಾಗಿದೆ. ಈತ ತನ್ನ ಪ್ರೇಯಸಿ ನಿತ್ಯಶ್ರೀಯನ್ನು ಮಚ್ಚಿನಿಂದ ಕತ್ತರಿಸಿ ಸಾಯಿಸಲು ಪ್ರಯತ್ನಿಸಿದ್ದಾನೆ. ಐದು ಬಾರಿ ನಿತ್ಯಶ್ರೀ ಕುತ್ತಿಗೆ, ತಲೆ, ಕಾಲು, ಹೊಟ್ಟೆ ಭಾಗಕ್ಕೆ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ನಿತ್ಯಶ್ರೀ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
Advertisement
Advertisement
ಏನಿದು ಘಟನೆ?
ಗಿರೀಶ್ ಮತ್ತು ನಿತ್ಯಶ್ರೀ ಮಂಡ್ಯದಲ್ಲಿ ಕಾಲೇಜು ವ್ಯಾಸಂಗ ಮಾಡುವ ವೇಳೆ ಪ್ರೀತಿ ಮಾಡುತ್ತಿದ್ದರು. ನಂತರ ಓದು ಮಗಿದ ಮೇಲೆ ನಿತ್ಯಶ್ರೀ ಮಂಡ್ಯದಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಳು. ಬೆಂಗಳೂರಿನ ಪಾಪರೆಡ್ಡಿ ಪಾಳ್ಯದಲ್ಲಿ ವಾಸವಿದ್ದ ನಿತ್ಯಶ್ರೀ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಗಿರೀಶ್ ಖಾಸಗಿ ಆಸ್ಪತ್ರೆಯ ಸೆಕ್ಯೂರಿಟಿ ಸೂಪರ್ ವೈಸರ್ ಆಗಿದ್ದು, ಕಳೆದ ಕೆಲವು ತಿಂಗಳಿಂದ ಇಬ್ಬರ ನಡುವೆ ಬಿನ್ನಾಭಿಪ್ರಾಯ ಉಂಟಾಗಿತ್ತು.
Advertisement
Advertisement
ಈ ಹಿಂದೆ ಇಬ್ಬರ ಪ್ರೀತಿಯ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬಳಿಕ ರಾಜಿ ಮಾಡಿಕೊಂಡು ಸುಮ್ಮನಾಗಿರುವುದಾಗಿ ಇಬ್ಬರು ಹೇಳಿದ್ದರು. ಆದರೆ ಈ ನಡುವೆ ಮತ್ತೆ ಗಿರೀಶ್ ನಿತ್ಯಶ್ರೀಗೆ ಕಾಟಕೊಡುತ್ತಿದ್ದ. ಈ ಕಾರಣದಿಂದಲೇ ನಿತ್ಯಶ್ರೀಗೆ ಆಕೆಯ ಮನೆಯವರು ಮುಂದಿನ ಜೂನ್ ತಿಂಗಳಲ್ಲಿ ಮದುವೆ ಮಾಡಲು ತಯಾರಿ ನಡೆಸಿದ್ದರು. ಇದನ್ನು ತಿಳಿದ ಗಿರೀಶ್ ಇಂದು ಯುವತಿ ತಾನು ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿಗೆ ಕೆಲಸಕ್ಕೆ ರಾಜೀನಾಮೆ ನೀಡಲು ತೆರಳಿದ್ದ ವೇಳೆ ಮಂಡ್ಯದಿಂದ ಬಂದು ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.
ಇದೇ ವೇಳೆ ಪೊಲೀಸರಿಗೆ ಇನ್ನೊಂದು ಅನುಮಾನ ಕಾಡುತ್ತಿದ್ದು, ಗಿರೀಶ್ ನಿತ್ಯಶ್ರೀ ಮೇಲೆ ಹಲ್ಲೇ ಮಾಡಿ ಆತ ಏನಾದರೂ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ಈ ಅನುಮಾದ ಬೆನ್ನಲ್ಲೇ ಸೈಕೋ ಪ್ರೇಮಿಯ ಹುಡುಕಾಟದಲ್ಲಿ ಪೊಲೀಸರು ತೊಡಿಗಿಕೊಂಡಿದ್ದಾರೆ. ಸದ್ಯ ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ.