ಬೆಂಗಳೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಸೋಲನುಭವಿಸಿದ್ದಾರೆ. ಫಲಿತಾಂಶದ ಬೆನ್ನಲ್ಲೇ ಇದೀಗ ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿ ಮತದಾರರಿಗೆ ಧನ್ಯವಾದ ತಿಳಿಸಿದ್ದು, ಪಕ್ಷದ ಕಾರ್ಯಕರ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೊದಲಿಗೆ ಆರ್ಆರ್ ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಫಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆ ಇಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ ಎಂದು ತಿಳಿಸಿದ್ದಾರೆ.
Advertisement
ಈ ಪಲಿತಾಂಶವನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ದೊಡ್ಡ ಮಟ್ಟದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳೋಣ. ಪಕ್ಷ ಸಂಘಟನೆಯ ಎಲ್ಲಾ ಸಂದರ್ಭಗಳಲ್ಲೂ ನಾನು ನಿಮ್ಮ ಜೊತೆಗಿರುತ್ತೇನೆ. ಉಪಚುನಾವಣೆಗೆ ಸಹಕರಿಸಿದ ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.#RRNagar
— DK Suresh (@DKSureshINC) November 10, 2020
Advertisement
ಮತ್ತೊಂದು ಟ್ವೀಟ್ನಲ್ಲಿ, ಈ ಫಲಿತಾಂಶವನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ದೊಡ್ಡ ಮಟ್ಟದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳೋಣ. ಪಕ್ಷ ಸಂಘಟನೆಯ ಎಲ್ಲ ಸಂದರ್ಭಗಳಲ್ಲೂ ನಾನು ನಿಮ್ಮ ಜೊತೆಗಿರುತ್ತೇನೆ. ಉಪಚುನಾವಣೆಗೆ ಸಹಕರಿಸಿದ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬರೆದಿದ್ದಾರೆ.
Advertisement
ಮೊದಲಿಗೆ RR ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಪಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆಯಿಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ.
— DK Suresh (@DKSureshINC) November 10, 2020
Advertisement
ಮುನಿರತ್ನ ಗೆಲುವು
ಆರ್.ಆರ್. ನಗರ ಮತ ಎಣಿಕೆ ಮುಕ್ತಾಯಗೊಂಡಿದ್ದು, ಮುನಿರತ್ನ ಅವರು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಕಳೆದ ಚುನಾವಣೆಗಿಂದ ಎರಡು ಪಟ್ಟು ಮತ ಪಡೆದು ಗೆಲುವು ಕಂಡಿದ್ದಾರೆ. ಸದ್ಯ ಚುನಾವಣೆ ಅಧಿಕಾರಿಯಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
* ಬಿಜೆಪಿ ಪಡೆದ ಮತ-12,5734
* ಕಾಂಗ್ರೆಸ್ ಪಡೆದ ಮತ -6,7798
* ಜೆಡಿಎಸ್ ಪಡೆದ – 10,251
* ಬಿಜೆಪಿ ಲೀಡ್- 57,936