ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಷ್ಟೇನು ಇಳಿಮುಖವಾಗದ ಹಿನ್ನೆಲೆ ಮತ್ತೆ 14 ದಿನಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
Advertisement
ಕೋವಿಡ್ ಪರಿಸ್ಥಿತಿ ಮತ್ತು ಲಾಕ್ಡೌನ್ ವಿಸ್ತರಣೆ ಕುರಿತು ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಡಿಸಿಎಂ ಅಶ್ವಥ್ ನಾರಾಯಣ, ಸಚಿವ ಆರ್.ಅಶೋಕ್, ಶಾಸಕ ಎಸ್.ಆರ್.ವಿಶ್ವನಾಥ್, ಸಿಎಸ್ ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಇಲಾಖೆ ಎಸಿಎಸ್ ಜಾವೇದ್ ಅಖ್ತರ್ ಭಾಗಿಯಾಗಿದ್ದರು.
Advertisement
Advertisement
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲಾಕ್ಡೌನ್ನಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಜನರ ಹಿತದೃಷ್ಟಿಯಿಂದ ಮತ್ತೆ ಲಾಕ್ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ, ಜನ ಸಹಕರಿಸಬೇಕು. ಕೊರೊನಾ ನಿಯಂತ್ರಣಕ್ಕೆ ಮತ್ತೆ ಎರಡು ವಾರಗಳ ಕಾಲ ಲಾಕ್ಡೌನ್ ವಿಧಿಸಲಾಗುತ್ತಿದ್ದು, ಮೇ 24 ರಿಂದ ಜೂನ್ 7ರ ವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿಂದಿನ ಲಾಕ್ಡೌನ್ ಮಾರ್ಗಸೂಚಿಗಳೇ ಮುಂದುವರಿಯುತ್ತವೆ ಎಂದು ಲಾಕ್ಡೌನ್ ಮಾರ್ಗಸೂಚಿಗಳ ಕುರಿತು ಸಿಎಂ ಸ್ಪಷ್ಟಪಡಿಸಿದ್ದಾರೆ.
Advertisement
ಬೆಳಗ್ಗೆ 10 ಗಂಟೆ ನಂತರ ಸಹ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, 9 ಗಂಟೆಗೆ ಮನೆಗೆ ಸೇರಬೇಕು, 10 ಗಂಟೆ ಬಳಿಕ ಯಾರೂ ಸಂಚರಿಸಕೂಡದು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ಬಳಿಕ ಯಾರೇ ಓಡಾಡಿದರೂ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.