ಬೆಂಗಳೂರು: ನಟಿ ರಾಗಿಣಿಯನ್ನು ಮತ್ತೆ 5 ದಿನ ಕೋರ್ಟ್ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿದೆ. ಕೋರ್ಟ್ ಆದೇಶದ ಅನ್ವಯ ಶುಕ್ರವಾರದವರೆಗೂ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲಿ ಇರಲಿದ್ದಾರೆ.
ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ ನಗರದ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯಿತು.
Advertisement
ಸಿಸಿಬಿ ಪರ ವಕೀಲರು ರಾಗಿಣಿ ವಿಚಾರಣೆ ನಡೆಸಬೇಕಿದೆ. ಹೀಗಾಗಿ 10 ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಸಿಸಿಬಿ ವಕೀಲರ ವಾದವವನ್ನು ಆಲಿಸಿದ ಬಳಿಕ ನ್ಯಾ.ಜಗದೀಶ್ ಅವರು 5 ದಿನ ಕಸ್ಟಡಿಗೆ ನೀಡಿದರು. ಇಂದಿನ ವಿಚಾರಣೆ ವೇಳೆ ರಾಗಿಣಿ ಪರ ವಕೀಲರು ಹಾಜರಾಗಿರಲಿಲ್ಲ.
Advertisement
Advertisement
ಸ್ಯಾಂಡಲ್ವುಡ್ ಡ್ರಗ್ ಡೀಲ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟಿ ರಾಗಿಣಿ ಅಲರ್ಜಿ ಸಮಸ್ಯೆ ಕಾಣಿಸಿದೆ. ನನಗೆ ಅಲರ್ಜಿ ಸಮಸ್ಯೆಯಾಗುತ್ತಿದೆ. ಹೀಗಾಗಿ ಡಾಕ್ಟರ್ ಸೇವೆ ಅಗತ್ಯವಿದೆ ಎಂದು ರಾಗಿಣಿ ಪೊಲೀಸರ ಬಳಿ ಕೇಳಿಕೊಂಡಿದ್ದಾರೆ. ಈ ಹಿಂದೆ ರಾಗಿಣಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು.
Advertisement
ರಾಗಿಣಿಯ ಮನವಿಯಂತೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ. ಐಷಾರಾಮಿ ಜೀವನ ನಡೆಸುತ್ತಿದ್ದವರು ಮಾನ್ಯ ಕೊಠಡಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಊಟ ಮತ್ತು ಎಣ್ಣೆಯಿಂದ ಅಲರ್ಜಿ ಸಮಸ್ಯೆ ಆಗಿರುವ ಸಾಧ್ಯತೆಯಿದೆ.
ಪ್ರಕರಣದಲ್ಲಿ ರಾಗಿಣಿ ಎರಡನೇ ಆರೋಪಿಯಾಗಿದ್ದಾರೆ. ರಾಗಿಣಿ ಮೇಲೆ ಬಲವಾದ ಸೆಕ್ಷನ್ಗಳನ್ನು ಹಾಕಲಾಗಿದೆ. ಹೀಗಾಗಿ ಸುಲಭವಾಗಿ ರಾಗಿಣಿಗೆ ಜಾಮೀನು ಸಾಧ್ಯವಿಲ್ಲ ಎಂದೇ ವಿಶ್ಲೇಸಿಸಲಾಗಿತ್ತು. ಅನಾರೋಗ್ಯ ಇರುವ ಜಾಮೀನು ಮಂಜೂರು ಆದರೂ ಆಗಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿತ್ತು.