ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯ ಚುನಾವಣೆ ಮತ್ತೆ ಮುಂದೂಡಿಕೆಯಾಗಿದೆ. ಕಳೆದ ವರ್ಷ ಆಗಸ್ಟ್ ನಿಂದಲೂ ಚುನಾವಣೆ ಮುಂದೂಡಿಕೆಯಾಗುತ್ತಾ ಬಂದಿದ್ದು, ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೆಲಸ ನಡೆಸಲಿದೆ.
ಇಂದು ಕಾಂಗ್ರೆಸ್ನ ಕಾರ್ಯಸಮಿತಿ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಜೂನ್ 23ಕ್ಕೆ ಚುನಾವಣೆ ನಡೆಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದ್ರೆ ಕಾಂಗ್ರೆಸ್ ನ ಎಲ್ಲ ನಾಯಕರು ಕೊರೊನಾ ಸಂಕಷ್ಟದಲ್ಲಿ ಚುನಾವಣೆ ನಡೆಸೋದು ಸೂಕ್ತವಲ್ಲ ಎಂದು ನಿರ್ಧರಿಸಿದ್ದಾರೆ. ಕಾರ್ಯಸಮಿತಿಯಲ್ಲಿ ಜೂನ್ 23ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನ ಮುಂದೂಡುವ ನಿರ್ಧಾರ ತೆಗೆದುಕೊಂಡಿದೆ.
Advertisement
Advertisement
2019ರ ಲೋಕಸಭೆ ಚುನಾವಣೆ ಫಲಿತಾಂಶ ದ ಬಳಿಕ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಇಂದಿಗೂ ಬಹುತೇಕರು ರಾಹುಲ್ ಗಾಂಧಿಅವರನ್ನೇ ಮತ್ತೊಮ್ಮೆ ಅಧ್ಯಕ್ಷರಾಗಲಿ ಎಂದು ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದ್ರೆ ರಾಹುಲ್ ಗಾಂಧಿ ಅಧ್ಯಕ್ಷರಾಗಲು ಸಮ್ಮತಿಸಿಲ್ಲ ಎಂದು ವರದಿಯಾಗಿದೆ. ಹಾಗಾಗಿ ಸೋನಿಯಾ ಗಾಂಧಿ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.
Advertisement
Advertisement
ಇದೇ ಸಭೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಮಾತನಾಡಿರುವ ಸೋನಿಯಾ ಗಾಂಧಿ, ನಮ್ಮ ಸ್ಥಿತಿ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಕೇರಳ ಮತ್ತು ಅಸ್ಸಾಂನಲ್ಲಿ ಆಡಳಿತ ವಿರೋಧಿ ಅಲೆ ನಡುವೆಯೂ ಪಕ್ಷ ಹೆಚ್ಚು ಸ್ಥಾನ ಗೆಲ್ಲುವಲ್ಲಿ ವಿಫಲವಾಗಿದ್ದೇಕೆ? ಪಶ್ಚಿಮ ಬಂಗಾಳದಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ ಏಕೆ ಎಂಬುದರ ಬಗ್ಗೆ ಅರ್ಥ ಮಾಡಿಕೊಳ್ಳುಬೇಕು ಎಂದು ಹೇಳಿದ್ದಾರೆ.