ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.
ಸಿಲಿಕಾನ್ ಸಿಟಿಯ ಅಗರ ಉದ್ಯನವನದಲ್ಲಿ ಸಂಯುಕ್ತ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇಂದು ಸಾರ್ವಜನಿಕರು ವಾಕಿಂಗ್ ಮಾಡುವ ಪಾರ್ಕ್ನಲ್ಲಿ ಸಂಯುಕ್ತ ಹೆಗ್ಡೆ ಮತ್ತವರ ಸಂಗಡಿಗರು ತುಂಡು ಹುಲಾ ಹೂಪ್ ಡ್ಯಾನ್ಸ್ ಮಾಡಿದ್ದಾರೆ.
Advertisement
Advertisement
ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರು ಮತ್ತು ಹಿರಿಯ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆಗ ಸಾರ್ವಜನಿಕರ ವಿರುದ್ಧ ನಟಿ ಸಂಯುಕ್ತ ಕಿರುಚಾಡಿ ರಂಪ ಮಾಡಿದ್ದಾರೆ. ಈ ವೇಳೆ ಸಾರ್ವಜನಿಕರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟನ್ನು ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ.
Advertisement
Advertisement
ಈ ವೇಳೆ ಗೇಟ್ ಓಪನ್ ಮಾಡುವಂತೆ ಸಂಯುಕ್ತ ಮತ್ತು ಸಾರ್ವಜನಿಕರ ನಡುವೆ ಜಗಳವಾಗಿದೆ. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆಗ ತಕ್ಷಣ ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದ ಸಂಯುಕ್ತ, ನಾನು ಏನೂ ತಪ್ಪು ಮಾಡಿಲ್ಲ. ಇವರು ಸುಮ್ಮನೆ ನಮ್ಮನ್ನು ಕೂಡಿ ಹಾಕಿದ್ದಾರೆ ಎಂದು ದೂರಿದ್ದಾರೆ. ಆನಂತರ ಪೊಲೀಸರು ಬಂದು ಆಕೆಯನ್ನು ಮತ್ತು ಅವರ ಸ್ನೇಹಿತರನ್ನು ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ.
https://www.instagram.com/tv/CEtwP4plMhN/?utm_source=ig_web_copy_link