ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಮತ್ತೊಮ್ಮೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಸೀಲ್ಡೌನ್ ಆಗಿದೆ.
ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಬಂದಿದೆ. ಬೀಟ್ ಡ್ಯೂಟಿ ಮಾಡುತ್ತಿದ್ದ ಹೆಡ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
Advertisement
Advertisement
ಈ ಹಿಂದೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆಗ ಠಾಣೆಯನ್ನು ಸೀಲ್ಡೌನ್ ಮಾಡಲಾಗಿತ್ತು. ಈಗ ಹೆಡ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ಬಂದಿರುವುರಿಂದ ಸ್ಟೇಷನ್ ಸೀಲ್ಡೌನ್ ಮಾಡಲಾಗಿದೆ.
Advertisement
ರಾಜ್ಯದಲ್ಲಿ ಪ್ರತಿನಿತ್ಯ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳು ಬರುತ್ತಿದ್ದು, ಜನರನ್ನು ಭಯಭೀತರನ್ನಾಗಿಸಿದೆ. ಗುರುವಾರ 1502 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ಒಂದರಲ್ಲೇ 889 ಜನರಿಗೆ ಸೋಂಕು ತಗುಲಿದೆ.
Advertisement
ಇತ್ತ ಈ ವರೆಗೆ ಒಟ್ಟು 21 ಪೊಲೀಸ್ ಠಾಣೆಗಳು ಸೀಲ್ಡೌನ್ ಆಗಿದ್ದು, 1300 ಜನ ಪೊಲೀಸರು ಕ್ವಾರಂಟೈನ್ನಲ್ಲಿದ್ದಾರೆ. ನಗರದಲ್ಲಿ ಈ ವರೆಗೆ ಒಟ್ಟು 210 ಜನ ಪೊಲೀಸರಿಗೆ ಸೋಂಕು ತಗುಲಿದ್ದು, ಇನ್ನೂ 137 ಸಕ್ರಿಯ ಪ್ರಕರಣಗಳಿವೆ. ಈ ವರೆಗೆ ಐವರು ಪೊಲೀಸರು ಕೊರೊನಾಗೆ ಬಲಿಯಾಗಿದ್ದಾರೆ.