ನವದೆಹಲಿ: ಕೋವಿಡ್-19 ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ರವರು ಶೀಘ್ರವೇ ಚೇತರಿಸಿಕೊಳ್ಳಬೇಕೆಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಶುಭ ಹಾರೈಸಿದ್ದಾರೆ.
Advertisement
ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (88) ರವರಿಗೆ ಸೋಮವಾರ ವಿಪರೀತ ಜ್ವರ ಕಾಣಿಸಿಕೊಂಡಿದ್ದರಿಂದ ಕೋವಿಡ್ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಮನಮೋಹನ್ ಸಿಂಗ್ರವರು ಕೋವಿಡ್-19 ಸೋಂಕಿನಿಂದ ಶೀಘ್ರವೇ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
Wishing ex Indian PM Manmohan Singh a speedy recovery from Covid 19.
— Imran Khan (@ImranKhanPTI) April 20, 2021
Advertisement
ಈ ಮುನ್ನ ಮನಮೋಹನ್ ಸಿಂಗ್ರವರು ಮಾರ್ಚ್ 4ರಂದು ಎರಡು ಡೋಸ್ ಕೊರೊನಾ ವ್ಯಾಕ್ಸಿನ್ ಪಡೆದುಕೊಂಡಿದ್ದರು.