-ತಾತ್ಕಾಲಿಕ ಪರಿಹಾರ ಕೇಂದ್ರ ಸ್ಥಾಪನೆ
ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜನ ಊಟಕ್ಕೂ ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ.
Advertisement
ಮನೆಗಳಿಗೆ ನೀರು ನುಗ್ಗಿರುವ ರಾಯಚೂರು ನಗರದ ಜಹಿರಾಬಾದ್, ಸಿಯತಲಾಬ್ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದು ಊಟದ ವ್ಯವಸ್ಥೆ ಮಾಡಲಾಗಿದೆ. ಮನೆಯಲ್ಲಿನ ದವಸ ಧಾನ್ಯ ಹಾಗೂ ಎಲ್ಲಾ ವಸ್ತುಗಳು ನೀರುಪಾಲಾಗಿದ್ದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ.
Advertisement
Advertisement
ನಿಧಾನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳೆಲ್ಲಾ ಸತತವಾಗಿ ಸುರಿದ ಮಳೆಯಿಂದ ಜಲಾವೃತವಾಗಿವೆ. ಚರಂಡಿ ನೀರು ಹರಿಯಲು ಸಮರ್ಪಕ ವ್ಯವಸ್ಥೆಯಿಲ್ಲದ ಕಾರಣ ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸದ್ಯ ತಾತ್ಕಾಲಿಕ ವ್ಯವಸ್ಥೆಯಾಗಿ ಮನೆಯಲ್ಲಿ ನೀರು ನುಗ್ಗಿದ ಬಡಾವಣೆಗಳ ಜನರಿಗೆ ಜಿಲ್ಲಾಡಳಿತ, ನಗರಸಭೆ ಸದಸ್ಯರು ಊಟದ ವ್ಯವಸ್ಥೆ ಮಾಡಿದ್ದಾರೆ.