ಶಿವಮೊಗ್ಗ: ಮನೆಯ ಮುಂದೆ ಕಟ್ಟೆಯ ಮೇಲೆ ಕುಳಿತಿದ್ದ ವ್ಯಕ್ತಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಸೂಡೂರು ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಇರಲ್ಲ, ಸಭೆ ಸಮಾರಂಭಕ್ಕೆ ಅವಕಾಶವಿಲ್ಲ – ಅನ್ಲಾಕ್ 3.ಔ ಘೋಷಣೆ
Advertisement
ಮೃತಪಟ್ಟ ವ್ಯಕ್ತಿಯನ್ನು ವಾಸುದೇವ (52) ಎಂದು ಗುರುತಿಸಲಾಗಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಾಗೇಂದ್ರ ಎಂಬುವರ ಮನೆಯ ಕಟ್ಟೆ ಮೇಲೆ ವಾಸುದೇವ ಹಾಗೂ ಇತರರು ಕುಳಿತಿದ್ದರು. ಈ ವೇಳೆ ಅಜಾಗರೂಕತೆಯಿಂದ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಬಂದ ಚಾಲಕ ದೇವರಾಜ್ ವಾಸುದೇವನಿಗೆ ಡಿಕ್ಕಿ ಹೊಡೆದಿದ್ದಾನೆ. ಟ್ರ್ಯಾಕ್ಟರ್ ಡಿಕ್ಕಿಯೊಡೆದ ಪರಿಣಾಮ ವಾಸುದೇವ ಗಂಭೀರ ಗಾಯಗೊಂಡಿದ್ದನು.
Advertisement
ಗಾಯಾಳು ವಾಸದೇವನನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಟ್ರ್ಯಾಕ್ಟರ್ ಚಾಲಕ ದೇವರಾಜ್ ವಿರುದ್ಧ ಕ್ರಮ ಜರುಗಿಸುವಂತೆ ಮೃತ ವಾಸುದೇವ ಅವರ ಪುತ್ರ ಕಾರ್ತಿಕ್ ಕುಂಸಿ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಕುಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement