ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ, ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.
ಜೂನ್ 7ರ ಮಧ್ಯರಾತ್ರಿ ಕರೆ ಮಾಡಿದ ಅಪರಿಚಿತ, ಜೀವ ಬೆದರಿಕೆ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪೊಲೀಸ್ ಮಹಾ ನಿರ್ದೆಶಕ ಪ್ರವೀಣ್ ಸೂದ್ ಅವರಿಗೆ ದೂರು ಸಲ್ಲಿಸಿದ್ದಾರೆ. ಅಪರಿಚಿತ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ ಅಂತ ಪ್ರಿಯಾಂಕ್ ಖರ್ಗೆ ದೂರಿನಲ್ಲಿ ದಾಖಲಿಸಿದ್ದಾರೆ.
Advertisement
Advertisement
ಪ್ರಿಯಾಂಕ್ ಖರ್ಗೆ ಅವರಿಗೂ ಸಹ ಅದೇ ದಿನ ಮಧ್ಯರಾತ್ರಿ 12.36ಕ್ಕೆ ಅಪರಿಚಿತ ನಂಬರ್ ನಿಂದ ಕರೆ ಬಂದಿದೆ. ಸುಮಾರು 10ಕ್ಕೂ ಹೆಚ್ಚು ಬಾರಿ ಕರೆ ಬಂದಿದ್ದರಿಂದ ಕರೆ ಸ್ವೀಕರಿಸಿದಾಗ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಿದ ವ್ಯಕ್ತಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಪ್ರಿಯಾಂಕ್ ಖರ್ಗೆ ದೂರಿನಲ್ಲಿ ತಿಳಿಸಿದ್ದಾರೆ.
Advertisement
ಲೋಕಸಭೆಯ ಪ್ರತಿಪಕ್ಷದ ನಾಯಕರಾಗಿದ್ದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರವಾಣಿಯಲ್ಲಿ ಪ್ರಾಣಬೆದರಿಕೆ ಹಾಕಿರುವ ಕೃತ್ಯವನ್ನು ಖಂಡಿಸುತ್ತೇನೆ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೇ ಮಾರಕ. ಅಪರಾಧಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.