ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ ಎನ್ನಲಾದ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ.
ಇದು ಫೇಕ್ ನ್ಯೂಸ್ ಆಗಿದ್ದು, ಪ್ರವೀಣ್ ಸೂದ್ ಅವರು ಆದೇಶ ಹೊರಡಿಸಿದ್ದಾರೆ ಎಂಬಂತೆ ಲೆಟರ್ ಹೆಡ್ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.
Advertisement
ಈ ಸಂಬಂಧ ಕರ್ನಾಟಕ ಸ್ಟೇಟ್ ಪೊಲೀಸ್ ಫ್ಯಾಕ್ಟ್ ಚೆಕ್ ವೆಬ್ಸೈಟ್ ಇದೊಂದು ಸುಳ್ಳು ಸುದ್ದಿಯಾಗಿದೆ ಎಂದು ತಿಳಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಈ ರೀತಿಯ ಆದೇಶವನ್ನು ಪ್ರಕಟಿಸಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಯಾರೂ ಈ ವದಂತಿಯನ್ನು ನಂಬಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
Advertisement
Advertisement
ನಕಲಿ ಸುತ್ತೋಲೆ ಏನಿತ್ತು?
ಕಳೆದ ತಿಂಗಳು ವಕೀಲರದ ಹರ್ಷ ಮುತಾಲಿಕ್, ಮಸೀದಿಯಲ್ಲಿನ ಧ್ವನಿ ವರ್ಧಕಗಳಿಂದ ಇತರೇ ಧರ್ಮದರಿಗೆ ತೊಂದರೆ ಆಗುತ್ತಿದೆ. ದಿನಕ್ಕೆ ಐದಾರು ಬಾರಿ ಪ್ರಾರ್ಥನೆ ಮಾಡಲಾಗತ್ತೆ. ಇದ್ದರಿಂದ ಮಕ್ಕಳಿಗೆ, ವಯಸ್ಸಾದವರಿಗೆ, ಹೃದಯ ಸಂಬಂಧಿ ಖಾಯಿಲೆ ಇರುವವರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಬೇಕು ಎಂದು ದೂರು ನೀಡಿದ್ದರು.
Advertisement
ಈಗ ಈ ದೂರಿಗೆ ಸ್ಪಂದಿಸಿದ ಡಿಜಿ ಪ್ರವೀಣ್ ಸೂದ್ ರಾಜ್ಯದ ಎಲ್ಲ ಜಿಲ್ಲೆಗಳ ಎಸ್ಪಿಗಳಿಗೆ ಹಾಗೂ ನಗರದ ಕಮಿಷನರ್ಗೆ ಪತ್ರ ಬರೆದಿದ್ದು, ರಾಜ್ಯಾದ್ಯಂತ ಮಸೀದಿಗಳಲ್ಲಿ ಹಾಕಿರುವ ಅನಧಿಕೃತ ಧ್ವನಿವರ್ಧಕ ತೆರವಿಗೆ ಆದೇಶ ಮಾಡಿದ್ದಾರೆ. ಜೊತೆಗೆ ಯಾವುದೇ ಅನಧಿಕೃತ ಧ್ವನಿವರ್ಧಕ ಬಳಕೆ ಮಾಡಿದ್ದರೆ, ಅದರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ತೆರವುಗೊಳಿಸಲು ಸೂಚಿಸಿದ್ದಾರೆ ಎಂಬ ಮಾಹಿತಿಯನ್ನು ನೀಡಲಾಗಿತ್ತು.