ಬೆಂಗಳೂರು: ಮಾಂಗಲ್ಯ ಅಡವಿಟ್ಟ ಮಕ್ಕಳ ಆನ್ಲೈನ್ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿದ ಮಹಾತಾಯಿಯ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದವು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಟ್ವೀಟ್ ಮೂಲಕ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.
ಕೊರೋನಾ ಸೋಂಕು ಜನರ ಜೀವ-ಜೀವನದ ಜೊತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ. ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ.
Advertisement
ಆನ್ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸುತ್ತೇನೆ.
4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 31, 2020
Advertisement
ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೊನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ. ಆನ್ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸುತ್ತೇನೆ.
Advertisement
ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ.
2/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 31, 2020
Advertisement
ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಬಯಸಿದ್ದೆ. ಆದರೆ ಟಿವಿಯಲ್ಲಿ ಪಾಠ ಬರುತ್ತಿದ್ದ ಕಾರಣ ಮಕ್ಕಳು ಬೇರೆ ಮನೆಗೆ ಹೋಗಿ ಟಿವಿ ನೋಡುತ್ತಿದ್ದರು. ಆದರೆ ಅವರು ಬೇರೆ ಬೇರೆ ಕಾರ್ಯಕ್ರಮಗಳನ್ನು ನೋಡುತ್ತಿದ್ದರು. ಹೀಗಾಗಿ ಮಕ್ಕಳು ಶಿಕ್ಷಣ ವಂಚಿತರಾಗಬಾರದೆಂದು ಟಿವಿ ಖರೀದಿ ಮಾಡುವ ನಿರ್ಧಾರ ಮಾಡಿದೆ. ಆದರೆ ಗ್ರಾಮದಲ್ಲಿ ಯಾರ ಬಳಿಯೂ ಸಾಲ ಲಭಿಸಿರಲಿಲ್ಲ. ಆದ್ದರಿಂದ ನನ್ನ ಬಳಿ ಇದ್ದ ಮಾಂಗಲ್ಯವನ್ನು ಅಡವಿಟ್ಟು ಟಿವಿ ತಂದಿದ್ದೇನೆ ಎಂದು ಕಸ್ತೂರಿ ಹೇಳಿದ್ದಾರೆ.
https://www.facebook.com/publictv/videos/688486148675277/
ಈ ಕುರಿತು ಬೆಳಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡುತ್ತಿದ್ದಂತೆ ತಾಯಿ ಅಡವಿಟ್ಟ ಮಾಂಗಲ್ಯ ಬಿಡಿಸಿಕೊಡುವ ಜವಾಬ್ದಾರಿ ನನ್ನದು ಎಂದು ಸಚಿವ ಸಿಸಿ ಪಾಟೀಲ್ ಭರವಸೆ ನೀಡಿದ್ದಾರೆ.