ಮುಂಬೈ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ಜಿಲ್ಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ.
ಹೌದು. ಬೀಡ್ ಜಿಲ್ಲೆಯಲ್ಲಿ ಮಾರ್ಚ್ 26ರಿಂದ ಏಪ್ರಿಲ್ 4ರವರೆಗೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ವರದಿಗಳ ಪ್ರಕಾರ ಈ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಎಲ್ಲಾ ಮದುವೆ ಹಾಲ್, ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳನ್ನು ಮುಚ್ಚಲಾಗುತ್ತದೆ.
Advertisement
Advertisement
ಲಾಕ್ ಡೌನ್ ಸಂದರ್ಭದಲ್ಲಿ ಬೀಡ್ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ಖಾಸಗಿ ಕಚೇರಿಗಳನ್ನು ಕೂಡ ಬಂದ್ ಮಾಡಲಾಗುತ್ತಿದ್ದು, ಉದ್ಯೋಗಿಗಳು ವರ್ಕ್ ಫ್ರಂ ಹೋಮ್ ಮೂಲಕ ಸಹಕರಿಸುವಂತೆ ಪ್ರೋತ್ಸಾಹಿಸಲಾಗುತ್ತದೆ. ಆದರೆ ದಿನಸಿ, ಹಾಲು ಮತ್ತು ಔಷಧಿಗಳನ್ನು ಒಳಗೊಂಡಂತೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಈ ಅವಧಿಯಲ್ಲಿ ವಿನಾಯಿತಿ ನೀಡಲಾಗುತ್ತದೆ.
Advertisement
ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದ್ದರಿಂದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 28,699 ಹೊಸ ಪ್ರಕರಣಗಳು ಕಂಡು ಬಂದಿದ್ದು, 13,165 ಮಂದಿ ಗುಣಮುಖರಾಗಿದ್ದಾರೆ. ಹಾಗೆಯೇ 132 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
Advertisement
ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, 2,30,641 ಸಕ್ರಿಯ ಹಾಗೂ ಗುಣಮುಖರಾಗಿರುವ 22,47,495 ಪ್ರಕರಣಗಳು ಸೇರಿ ಒಟ್ಟು ಪ್ರಕರಣಗಳ ಸಂಖ್ಯೆ 25,33,026ಕ್ಕೆ ಏರಿಕೆಯಾಗಿದೆ. ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಗ ಆದಿತ್ಯ ಠಾಕ್ರೆ ಅವರಿಗೆ ಕೊರೊನಾ ಬಂದಿರುವುದು ದೃಢಪಟ್ಟಿತ್ತು.