– ವಿದೇಶದಿಂದ ಬರುವವರಿಗೆ 14 ದಿನ ಕ್ವಾರಂಟೈನ್
ಮುಂಬೈ: ಮಹಾರಾಷ್ಟ್ರ ಸರ್ಕಾರ ಮತ್ತೆ ನೈಟ್ ಕರ್ಫ್ಯೂ ಜಾರಿಗೆ ನಿರ್ಧರಿಸಿದ್ದು, ನಾಳೆಯಿಂದ ರಾಜ್ಯದ ಎಲ್ಲ ನಗರಸಭೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ.
ಜನವರಿ 5ರ ವರೆಗೆ ನೈಟ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಇಂಗ್ಲೆಂಡ್ನಲ್ಲಿ ಕೊರೊನಾ ಹೊಸ ರೂಪ ತಾಳಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ರಾತ್ರಿ 11ರಿಂದ ಬೆಳಗ್ಗೆ 6 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
Advertisement
Advertisement
ಯೂರೋಪಿಯನ್ ಹಾಗೂ ಮಧ್ಯಪ್ರಾಚ್ಯ ದೇಶಗಳಿಂದ ಬರುವವರು 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಆಗುವುದು ಕಡ್ಡಾಯವಾಗಿದೆ. ಅಲ್ಲದೆ ಮಹಾರಾಷ್ಟ್ರಕ್ಕೆ ಆಗಮಿಸಿದ 5 ಅಥವಾ 7ನೇ ದಿನ ಕೊರೊನಾ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದೆ. ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆಸ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಹರಡುವ ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಳ್ಳಲಾಗಿದೆ.
Advertisement
Advertisement
ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೊರೊನಾ ಲಕ್ಷಣಗಳು ಕಂಡುಬಂದರೆ ಪ್ರತ್ಯೇಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲದೆ ವಿದೇಶದಿಂದ ಆಗಮಿಸುವ ಎಲ್ಲ ಪ್ರಯಾಣಿಕರಿಗೆ ಹೋಮ್ ಕ್ವಾರಂಟೈನ್ ಕಡ್ಡಾಯವಾಗಿದೆ. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉದ್ಧವ್ ಠಾಕ್ರೆ ತಿಳಿಸಿದ್ದಾರೆ.