ವಿಜಯಪುರ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭಾರೀ ಮಳೆಯಿಂದ ವಿಜಯಪುರದಲ್ಲಿ ಪ್ರವಾಹದ ಆತಂಕ ಮನೆ ಮಾಡಿದೆ.
Advertisement
ಜಿಲ್ಲೆಯ ಆಲಮಟ್ಟಿ ಲಾಲಬಾಹ್ದೂರ ಶಾಸ್ತ್ರಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, 4 ಲಕ್ಷ ಕ್ಯೂಸೆಕ್ಸ್ ಗೂ ಅಧಿಕ ಒಳಹರಿವು ಮತ್ತು ಹೊರಹರಿವು ಇದ್ದು, ಜಿಲ್ಲೆಯ ಮುದ್ದೇಬಿಹಾಳ, ನಿಡಗುಂದಿ ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ.
Advertisement
Advertisement
ಮುದ್ದೇಬಿಹಾಳ ತಾಲೂಕಿನ ಕಮ್ಮಲದಿನ್ನಿ ಗ್ರಾಮದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಕಮ್ಮಲದಿನ್ನಿ-ಗಂಗೂರ ರಸ್ತೆ ಜಲಾವೃತವಾಗಿದೆ. ಇದರಿಂದ ರಸ್ತೆ ಸಂಚಾರ ಬಂದ್ ಆಗಿದೆ. ಜಲಾವೃತವಾದ ರಸ್ತೆ ಮೇಲೆಯೇ ಅಪಾಯದಲ್ಲಿ ಜನರು ಸಂಚಾರ ಮಾಡುತ್ತಿದ್ದಾರೆ. ಕಮ್ಮಲದಿನ್ನಿ ಗ್ರಾಮವನ್ನು ಕೃಷ್ಣಾ ನದಿಯ ನೀರು ಸುತ್ತುವರಿದಿದೆ.