– ಬೆಚ್ಚಿಬಿದ್ದ ಮದ್ದೂರು ಜನತೆ
ಮಂಡ್ಯ: ಮಹಿಳೆಯ ಕೈ ಕಾಲುಗಳನ್ನ ಕಟ್ಟಿ ಹಾಕಿ, ಮುಖದ ಮೇಲೆ ಹಾಸಿಗೆ ಹಿಡಿದು ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ನಡೆದಿದೆ.
Advertisement
ವಿವಿ ನಗರದಲ್ಲಿ ಮಹಿಳೆ ಕುಟುಂಬದೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿದ ಕಿರಾತಕರು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಮನೆಗೆ ಪತಿ ಮತ್ತು ಮಗ ಹಿಂದಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಅತ್ಯಾಚಾರಗೈದು ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement
Advertisement
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮದ್ದೂರು ಜನತೆಯಲ್ಲಿ ಆತಂಕ ಮನೆ ಮಾಡಿದೆ.