ಹಾವೇರಿ: ಬೆಂಗಳೂರಿನಲ್ಲಿ ನಡೆದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Advertisement
ಹಾವೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕ್ತಿದ್ದಾರೆ. ಹತ್ಯೆ ಯಾರು ಮಾಡಿದ್ದಾರೆ ಅವರು ಶೀಘ್ರದಲ್ಲಿ ಬಂಧನ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.
Advertisement
ಇದೇ ವೇಳೆ ಮಾಜಿ ಸಚಿವ ಜಮೀರ್ ಅಹಮ್ಮದ್ ಮೇಲಿನ ಆರೋಪದ ಬಗ್ಗೆ ಗೊತ್ತಿಲ್ಲ. ಸಂಪೂರ್ಣ ತನಿಖೆ ನಡೆಯುತ್ತಿದೆ. ಹತ್ಯೆ ಮಾಡಿದ ಆರೋಪಿಯನ್ನ ಶೀಘ್ರದಲ್ಲಿ ಬಂಧನ ಆಗುತ್ತಾರೆ ಎಂದು ತಿಳಿಸಿದರು.
Advertisement
Advertisement
ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಹತ್ಯೆ ಮಾಡಲಾಗಿದೆ. ಛಲವಾದಿಪಾಳ್ಯ ಕಾರ್ಪೊರೇಟ್ ಆಗಿದ್ದ ರೇಖಾ ಕದಿರೇಶ್ ಅವರನ್ನು ಸಹಚರರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ರೇಖಾ ಕದಿರೇಶ್ ಮನೆ ಮುಂದೆಯೇ ಇಂದು ಹಲ್ಲೆ ನಡೆದಿತ್ತು. ಮನೆಯ ಒಳಗಡೆ ಇದ್ದ ರೇಖಾ ಅವರನ್ನು ಹೊರಗೆ ಕರೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.
ಛಲವಾದಿ ಪಾಳ್ಯದ ಬಿಜೆಪಿ ಪಾಲಿಕೆ ಸದಸ್ಯರಾಗಿದ್ದ ರೇಖಾ ಅವರ ಪತಿ ಕದಿರೇಶ್ ಅವರನ್ನು 2018ರಲ್ಲಿ ಹಾಡಹಗಲೇ ಕಾಟನ್ಪೇಟೆಯ ಅಂಜಿನಪ್ಪ ಗಾರ್ಡನ್ ನಲ್ಲಿ ಕೊಲೆ ಮಾಡಲಾಗಿತ್ತು.